ಜಮ್ಮು-ಕಾಶ್ಮೀರ: ಬಾರಾಮುಲ್ಲಾದಲ್ಲಿ ಎನ್'ಕೌಂಟರ್-2 ಉಗ್ರರನ್ನು ಹೊಡೆದುರುಳಿಸಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳು ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಗುರುವಾರ ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳು ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಗುರುವಾರ ತಿಳಿದುಬಂದಿದೆ. 
ಬಾರಾಮುಲ್ಲಾದ ಸೊಪೋರ್' ನ ಬರತ್ಕಲನ್-ಗುಂಡ್ ಮೊಹಲ್ಲಾದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಖಚಿತ ಮಾಹಿತಿ ಲಭ್ಯವಾದ ಹಿನ್ನಲೆಯಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದರು. 
ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಕಾರ್ಯಾಚರಣೆಯನ್ನು ಎನ್'ಕೌಂಟರ್ ಆಗಿ ಬದಲಾಯಿಸಿದ ಯೋಧರು, ಸ್ಥಳವನ್ನು ಸುತ್ತುವರೆದು ಉಗ್ರರ ದಾಳಿಗೆ ದಿಟ್ಟ ಉತ್ತರ ನೀಡಿದ್ದಾರೆ. ಇದರಂತೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com