ಮಧ್ಯ ಪ್ರದೇಶ: ಕಮಲ್ ನಾಥ್ ಗೆ ಸಿಎಂ ಗಾದಿ, ಸಿಂದ್ಯಾಗೆ ಉಪ ಮುಖ್ಯಮಂತ್ರಿ ಹುದ್ದೆ ಸಾಧ್ಯತೆ!

ಮಧ್ಯ ಪ್ರದೇಶ ಸಿಎಂ ಗಾದಿಗೆ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರ ಆಯ್ಕೆ ಬಹುತೇಕ ಖಚಿತವಾಗಿದ್ದು, ಜ್ಯೋತಿರಾಧಿತ್ಯ ಸಿಂಧ್ಯಾ ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಮಧ್ಯ ಪ್ರದೇಶ ಸಿಎಂ ಗಾದಿಗೆ ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರ ಆಯ್ಕೆ ಬಹುತೇಕ ಖಚಿತವಾಗಿದ್ದು, ಜ್ಯೋತಿರಾಧಿತ್ಯ ಸಿಂಧ್ಯಾ ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಕಾಂಗ್ರೆಸ್ ಪಕ್ಷದ ಮೂಲಗಳು ಮಾಹಿತಿ ನೀಡಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಹಿರಿಯ ಮುಖಂಡ ಅನುಭವಿ ನಾಯಕ ಕಮಲ್ ನಾಥ್ ಅವರನ್ನೇ ಮುಖ್ಯಮಂತ್ರಿ ಸ್ಥಾನಕ್ಕೆ ಅಂತಿಮಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೇ ಸಿಎಂ ರೇಸ್ ನಲ್ಲಿದ್ದ ಯುವ ನಾಯಕ ಜ್ಯೋತಿರಾಧಿತ್ಯ ಸಿಂಧ್ಯಾ ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಲು ರಾಹುಲ್ ಗಾಂಧಿ ನಿರ್ಧರಿಸಿದ್ದಾರೆ ಎನ್ನಲಾಗಿದೆಯ
ಮಧ್ಯ ಪ್ರದೇಶ ಸಿಎಂ ಆಯ್ಕೆಗಾಗಿ ಖುದ್ಧ ರಾಹುಲ್ ಗಾಂಧಿ ಅವರೇ ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರನ್ನೂ ಪರಿಗಣನೆಗೆ ತೆಗೆದುಕೊಂಡು ಆಯ್ಕೆ ಮಾಡಿದ್ದಾರೆ. ಈ ಪೈಕಿ ಬಹುತೇಕ ಶಾಸಕರು ಕಮಲ್ ನಾಥ್ ಅವರ ಪರ ಒಲವು ತೋರಿಸಿದ್ದು ಇದೇ ಕಾರಣಕ್ಕೆ ಅವರನ್ನೇ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ.
ಇನ್ನು ರಾಜಸ್ಥಾನದಲ್ಲಿ ಅಧಿಕಾರ ರಚನೆಗೆ ರಾಹುಲ್ ಗಾಂಧಿ ಹೊಸದೊಂದು ಪ್ಲಾನ್ ಮಾಡಿದ್ದು, ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ನಿರ್ಧರಿಸಲು ಪಕ್ಷದ ಕಾರ್ಯಕರ್ತರನ್ನು ಕರೆದು ರಾಹುಲ್‌ ಗಾಂಧಿ ಹೊಸ ತಂತ್ರವೊಂದನ್ನು ಅನುಸರಿಸುತ್ತಿದ್ದಾರೆ. ಕಾರ್ಯಕರ್ತರು ಆಡಿಯೋ ಸಂದೇಶದ ಮೂಲಕ ತಮ್ಮ ಆದ್ಯತೆಯ ಮುಖ್ಯಮಂತ್ರಿಯ ಹೆಸರನ್ನು ಹಂಚಿಕೊಳ್ಳಲು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com