ರಾಂಚಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ದೆ ಸ್ಥಳೀಯ ಕೋರ್ಟ್ ಸಮನ್ಸ್ ನೀಡಿದೆ.
ನವೆಂಬರ್ 28ರಂದು ಈ ಸಂಬಂಧ ವಿಚಾರಣೆ ನಡೆಸಿದ ಉಪವಿಭಾಗೀಯ ಕೋರ್ಟ್ ಮ್ಯಾಜಿಸ್ಟ್ರೇಟ್ ಅಜಯ್ ಕುಮಾರ್ ಗುಡಿಯಾ ರಾಹುಲ್ ಗಾಂಧಿಗೆ ಸಮನ್ಸ್ ನೀಡಿದ್ದಾರೆ,.
ಮಾರ್ಚ್ 18 ರಂದು ನಡೆದ ಇಂಡಿಯನ್ ಕಾಂಗ್ರೆಸ್ ಸಮಾವೇಶದಲ್ಲಿ ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ಅವಹೇಳನಕಾರಿ ಮಾತನಾಡಿದ್ದರು ಎಂದು ಭಾರತೀಯ ಜನತಾ ಯುವ ಮೋರ್ಚಾ ನಾಯಕ ನವೀನ್ ಜಾ ಆರೋಪಿಸಿ ದೂರು ಸಲ್ಲಿಸಿದ್ದರು.
ರಾಹುಲ್ ಗಾಂಧಿ ಹೇಳಿಕೆಯಿಂದ ಪಕ್ಷದ ಘನತೆಗೆ ಧಕ್ಕೆಯಾಗಿದ್ದು,ನಮ್ಮ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ದೂರಿದ್ದಾರೆ.