ಗುರುವಾರವಷ್ಟೇ ಪಕ್ಷದ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಜ.11 ಮತ್ತು 12 ರಂದು ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸಲು ತೀರ್ಮಾನಿಸಲಾಗಿದೆ. ರಾಜಸ್ಥಾನ, ಛತ್ತೀಸ್ಗಢ, ಮಧ್ಯಪ್ರದೇಶ, ತೆಲಂಗಾಣ ಹಾಗೂ ಮಿಜೋರಾಂನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಪ್ರದರ್ಶನ ಕುರಿತು ಯಾವುದೇ ರೀತಿಯ ಚರ್ಚೆಗಳು ನಡೆದಿಲ್ಲ ಎಂದು ತಿಳಿಸಿದ್ದಾರೆ.