ಭಾನುವಾರ ಸೋನಿಯಾ ಕ್ಷೇತ್ರಕ್ಕೆ ಪ್ರಧಾನಿ ಮೋದಿ ಭೇಟಿ, ಹಂಸಪರ್ ಎಕ್ಸ್ ಪ್ರೆಸ್ ಗೆ ಚಾಲನೆ

ಹಿಂದಿ ಭಾಷಿಕ ಮೂರು ರಾಜ್ಯಗಳಲ್ಲಿ ಬಿಜೆಪಿ ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾದ ನಂತರ ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಗಾಂಧಿ ಕುಟುಂಬ ಪ್ರತಿನಿಧಿಸುವ ರಾಯ್ ಬರೇಲಿಗೆ ಭೇಟಿ ನೀಡುತ್ತಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ:  ಹಿಂದಿ ಭಾಷಿಕ ಮೂರು ರಾಜ್ಯಗಳಲ್ಲಿ ಬಿಜೆಪಿ ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾದ ನಂತರ ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಗಾಂಧಿ ಕುಟುಂಬ ಪ್ರತಿನಿಧಿಸುವ ರಾಯ್ ಬರೇಲಿಗೆ ಭೇಟಿ ನೀಡುತ್ತಿದ್ದಾರೆ.

ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ, ಅದಕ್ಕೂ ಮುಂಚೆ ಅವರ ಕುಟುಂಬ ಸದಸ್ಯರು  ಪ್ರತಿನಿಧಿಸುತ್ತಿದ್ದ ರಾಯ್ ಬರೇಲಿಗೆ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಭೇಟಿ ನೀಡುತ್ತಿದ್ದಾರೆ. 2019ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಕಾಂಗ್ರೆಸ್ ನಾಯಕರ ವಿರುದ್ಧ ಕಾರ್ಯತಂತ್ರ ರೂಪಿಸಲು ಮೋದಿ ಭೇಟಿ ನೀಡುತ್ತಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ.

ಭಾನುವಾರ ರಾಯ್ ಬರೇಲಿಗೆ ಭೇಟಿ ನೀಡಲಿರುವ ಪ್ರಧಾನಿ ಹಂಸಪರ್ ಎಕ್ಸ್ ಪ್ರೆಸ್  ಸಂಚಾರಕ್ಕೆ  ಹಸಿರು ನಿಶಾನೆ ತೋರಲಿದ್ದು, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ರಾಯ್ ಬರೇಲಿಗೆ ಭೇಟಿ ನೀಡಿ ಪೂರ್ವ ಸಿದ್ಧತೆಯನ್ನು ಪರಿಶೀಲಿಸಿದ್ದಾರೆ.

ರಾಯ್ ಬರೇಲಿಯಲ್ಲಿರುವ ರೈಲು ಬೋಗಿ ಕಾರ್ಖಾನೆಗೂ ಪ್ರಧಾನಿ ಭೇಟಿ ನೀಡಲಿದ್ದಾರೆ. ಇದೇ ವೇಳೆ ಮೋದಿ 1.100 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಸೋನಿಯಾಗಾಂಧಿ ಕಳೆದ ಏಪ್ರಿಲ್ ನಿಂದ ಕ್ಷೇತ್ರಕ್ಕೆ ಭೇಟಿ ನೀಡಿಲ್ಲ. 2016ರ ಮಧ್ಯಭಾಗದಲ್ಲಿ ಮಾತ್ರ ಭೇಟಿ ನೀಡಿದ್ದರು. ಅಲ್ಲದೇ 2017ರಲ್ಲಿ ಉತ್ತರ ಪ್ರದೇಶ ಚುನಾವಣೆ ಸಂದರ್ಭದಲ್ಲೂ ಸೋನಿಯಾಗಾಂಧಿ ಪ್ರಚಾರ ನಡೆಸಿರಲಿಲ್ಲ. ಅನಾರೋಗ್ಯದ ಕಾರಣ  ವಾರಾಣಾಸಿಯಲ್ಲಿ ಸೋನಿಯಾಗಾಂಧಿ  ರೋಡ್  ಶೋ ನಡೆಸಿರಲಿಲ್ಲ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com