ಮುಖಾಮುಖಿ ಎದುರಾದರೂ ಪರಸ್ಪರ ಮಾತನಾಡದ ಪ್ರಧಾನಿ ಮೋದಿ-ರಾಹುಲ್

Published On :
ನವದೆಹಲಿ: 2001ರಲ್ಲಿ ಸಂಭವಿಸಿದ ಸಂಸತ್ ಮೇಲಿನ ದಾಳಿಯ ವರ್ಷಾಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಗುರುವಾರ ಮುಖಾಮುಖಿ ಎದುರಾದರೂ ಪರಸ್ಪರ ಮಾತನಾಡದೇ, ನಗದೆ ಮುಖ ತಿರುಗಿಸಿಕೊಂಡು ಹೋದ ಪ್ರಸಂಗ ನಡೆಯಿತು.
ಕಾರ್ಯಕ್ರಮದಲ್ಲಿ ಉಭಯ ನಾಯಕರಿಬ್ಬರೂ ಅಂತರ ಕಾಯ್ದುಕೊಂಡರು. ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು, ಲೋಕಸಭಾಧ್ಯಕ್ಷೆ ಸುಮಿತ್ರಾ ಮಹಾಜನ್, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಬಿಜೆಪಿ ಮುಖಂಡ ಎಲ್.ಕೆ. ಅಡ್ವಾಣಿ ಸೇರಿದಂತೆ ಅನೇಕರು ಸಮಾರಂಭದಲ್ಲಿ ಹಾಜರಿದ್ದರು.
ಮನಮೋಹನ್ ಸಿಂಗ್ ಅವರ ಜೊತೆಗೆ ಮೋದಿ ಕೈಕುಲುಕಿ ಕುಶಲೋಪರಿ ವಿಚಾರಿಸಿದರು. ಆದರೆ, ರಾಹುಲ್ ಗಾಂಧಿ- ಮೋದಿ ಮಾತ್ರ ಪರಸ್ಪರರು ಮಾತನಾಡಲೇ ಇಲ್ಲ.
ಕೇಂದ್ರ ಸಚಿವರಾದ ರಾಮದಾಸ್ ಅಠಾವಳೆ ಹಾಗೂ ವಿಜಯ್ ಗೋಯಲ್ ಅವರು ರಾಹುಲ್ ಗಾಂಧಿಯವರ ಕೈ ಕುಲುಕಿ ಕುಶಲೋಪರಿ ವಿಚಾರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


