ರಾಫೇಲ್ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಸಲ್ಲಿಸಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಜೇಟ್ಲಿ, ರಾಫೇಲ್ ಯುದ್ಧ ವಿಮಾನ ಖರೀದಿಗೆ ಅಡ್ಡಿಪಡಿಸುತ್ತಿದ್ದವರು ಈಗ ಎಲ್ಲವನ್ನೂ ಕಳೆದುಕೊಂಡಂತಾಗಿದೆ. ಕೇಂದ್ರ ಸರ್ಕಾರ ನೀಡಿದ್ದ ಅಂಕಿ ಅಂಶ ಸತ್ಯವಾಗಿದ್ದು, ರಾಹುಲ್ ಗಾಂಧಿ ಒದಗಿಸಿದ್ದ ಅಂಕಿ ಅಂಶ ಸುಳ್ಳು ಎಂದು ಸಾಬೀತಾಗಿದೆ ಎಂದರು.