ತೀರ್ಪಿನಿಂದ ಹಿನ್ನಡೆಯಾಗಿಲ್ಲ, ರಫೇಲ್ ವಿವಾದ ಜನರ ನ್ಯಾಯಾಲಯದಲ್ಲಿದೆ: ಜ್ಯೋತಿರಾದಿತ್ಯ ಸಿಂಧಿಯಾ

ಸುಪ್ರೀಂ ತೀರ್ಪಿನಿಂದ ಹಿನ್ನಡೆಯಾಗಿಲ್ಲ, ರಫೇಲ್ ವಿವಾದ ಜನರ ನ್ಯಾಯಾಲದಲ್ಲಿದೆ, ಈ ವಿಷಯವನ್ನು ಸಂಸತ್ತಿನಲ್ಲಿ ಚರ್ಚಿಸಲಾಗುವುದು ಎಂದು ಕಾಂಗ್ರೆಸ್ ...
ಜ್ಯೋತಿರಾಧಿತ್ಯ ಸಿಂಧಿಯಾ
ಜ್ಯೋತಿರಾಧಿತ್ಯ ಸಿಂಧಿಯಾ
ನವದೆಹಲಿ: ಸುಪ್ರೀಂ ತೀರ್ಪಿನಿಂದ ಹಿನ್ನಡೆಯಾಗಿಲ್ಲ, ರಫೇಲ್ ವಿವಾದ ಜನರ ನ್ಯಾಯಾಲದಲ್ಲಿದೆ, ಈ ವಿಷಯವನ್ನು ಸಂಸತ್ತಿನಲ್ಲಿ ಚರ್ಚಿಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಜ್ಯೋತಿರಾಧಿತ್ಯ ಸಿಂಧಿಯಾ ಹೇಳಿದ್ದಾರೆ.
ವಿವಾದಾತ್ಮಕ ರಫೇಲ್ ಯುದ್ಧ ವಿಮಾನ ಖರೀದಿ ಕುರಿತು ನ್ಯಾಯಾಲಯದ ಉಸ್ತುವಾರಿಯಲ್ಲಿ ತನಿಖೆ ಒಳಪಡಿಸಬೇಕು ಎಂದು ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಆದರೆ ಇದರಿಂದ ಕಾಂಗ್ರೆಸ್ ಗೆ ಹಿನ್ನಡೆಯಾಗಿಲ್ಲ, ಜನರ ನ್ಯಾಯಾಲಯದಲ್ಲಿ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.
ರಫೇಲ್ ಡೀಲ್ ವಿವಾದ ಸಂಬಂಧ ಜಂಟಿ ಸಂಸದೀಯ ಸಮಿತಿ ರಚಿಸಿ ತನಿಖೆ ನಡೆಸುವಂತೆ ಸಂಸತ್ತಿನಲ್ಲಿ ಒತ್ತಾಯಿಸುವುದಾಗಿ ಹೇಳಿದ್ದಾರೆ.
ಯುದ್ಧ ವಿಮಾನ ಖರೀದಿ ಒಪ್ಪಂದಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ವಕೀಲ ಎಂ.ಎಲ್.ಶರ್ಮಾ ಹಾಗೂ ಎನ್'ಜಿಒ ಅರ್ಜಿಯನ್ನು ಸಲ್ಲಿಸಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com