ಸಿಎಂ ರೇಸ್ ನಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಪಟ್ಟು ಹಿಡಿದಿದ್ದ ಸಚಿನ್ ಪೈಲಟ್ ಅವರಿಗೆ ರಾಹುಲ್ ಗಾಂಧಿ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಆದರೆ, ಕಾಂಗ್ರೆಸ್ ಹೈಕಮಾಂಡ್ ನೀಡಿರುವ ಉಪ ಮುಖ್ಯಮಂತ್ರಿ ಸ್ಥಾನವನ್ನು ಸಚಿನ್ ಪೈಲಟ್ ಸ್ವೀಕರಿಸುತ್ತಾರೋ ಇಲ್ಲವೋ ಎಂಬುದು ತಿಳಿದುಬಂದಿಲ್ಲ.