ರಫೇಲ್ ಖರೀದಿ ಕುರಿತು ತನಿಖೆ ನಡೆಯಲಿದೆಯೇ?: ವಿವಾದಿತ ಒಪ್ಪಂದ ಕುರಿತು ಸುಪ್ರೀಂ ಮಹತ್ವದ ತೀರ್ಪು ಇಂದು

ವಿವಾದಾತ್ಮಕ ರಫೇಲ್ ಯುದ್ಧ ವಿಮಾನ ಖರೀದಿ ಕುರಿತು ನ್ಯಾಯಾಲಯದ ಉಸ್ತುವಾರಿಯಲ್ಲಿ ತನಿಖೆ ಒಳಪಡಿಸಬೇಕು ಎಂಬ ಅರ್ಜಿಗಳಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಲಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ವಿವಾದಾತ್ಮಕ ರಫೇಲ್ ಯುದ್ಧ ವಿಮಾನ ಖರೀದಿ ಕುರಿತು ನ್ಯಾಯಾಲಯದ ಉಸ್ತುವಾರಿಯಲ್ಲಿ ತನಿಖೆ ಒಳಪಡಿಸಬೇಕು ಎಂಬ ಅರ್ಜಿಗಳಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಲಿದೆ.
ಒಪ್ಪಂದ ಕುರಿತು ಒಂದು ವೇಳೆ ನ್ಯಾಯಾಲಯವು ತನಿಖೆಗೆ ಆದೇಶಿಸಿದ್ದೇ ಆದರೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಮುಜುಗರಕ್ಕೊಳಗಾಗಲಿದೆ. ಇನ್ನು ವಿರೋಧ ಪಕ್ಷಗಳಿಗೆ ಬಹುದೊಡ್ಡ ಅಸ್ತ್ರ ಸಿಗುವ ಸಾಧ್ಯತೆಗಳೂ ಇವೆ. 
ಮುಖ್ಯ ನ್ಯಾಯಾಧೀಶ ನ್ಯಾ.ರಂಜನ್ ಗೊಗೋಯ್ ನೇತೃತ್ವದ ಪೀಠನ ನ.14ಕ್ಕೆ ತೀರ್ಪು ಕಾಯ್ದಿರಿಸಿತ್ತು. ವಕೀಲ ಎಂ.ಎಲ್. ಶರ್ಮಾ ಎಂಬುವವರು ಈ ಪ್ರಕರಣದ ಮೊದಲ ಅರ್ಜಿದಾರರಾಗಿದ್ದರು. ನಂತರ ವಿನೀತ್ ದಂಡಾ ಎಂಬ ಮತ್ತೊಬ್ಬ ವಕೀಲರು ಕೋರ್ಟ್ ಉಸ್ತುವಾರಿ ತನಿಖೆ ನಡೆಯಬೇಕು ಎಂದು ಅರ್ಜಿಯಲ್ಲಿ ಸಲ್ಲಿಸಿದ್ದರು. 
ಆಮ್ ಆದ್ಮಿ ಪಕ್ಷದ ಮುಖಂಡ ಸಂಜಯ್ ಸಿಂಗ್, ಮಾಜಿ ಸಚಿವ ಯಶವಂತ್ ಸಿನ್ಹಾ, ಅರುಣ್ ಶೌರಿ, ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಕೂಡ ಅರ್ಜಿ ಸಲ್ಲಿಸಿ, ಸಿಬಿಐಗೆ ಈ ಸಂಬಂಧ ಎಫ್ಐಆರ್ ದಾಖಲಿಸಿಕೊಳ್ಳಲು ನ್ಯಾಯಾಲಯ ಆದೇಶಿಸಬೇಕೆಂದು ಮನವಿ ಮಾಡಿಕೊಂಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com