ಯೋಗಿ ಆದಿತ್ಯನಾಥ್
ದೇಶ
ಉತ್ತರ ಪ್ರದೇಶ ಸಿಎಂಗೆ ಕಪ್ಪು ಭಾವುಟ ಪ್ರದರ್ಶಿಸಿದ ಯುವಕನ ಬಂಧನ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕಪ್ಪು ಭಾವುಟ ಪ್ರದರ್ಶಿಸಲು ಯತ್ನಿಸಿದ ಯುವಕನನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.
ಪ್ರತಾಪ್ ಗಢ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕಪ್ಪು ಭಾವುಟ ಪ್ರದರ್ಶಿಸಲು ಯತ್ನಿಸಿದ ಯುವಕನನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.
ಯೋಗಿ ಆದಿತ್ಯನಾಥ್ ಅವರು ತಮ್ಮ ಸಂಪುಟದ ಸಹೋದ್ಯೋಗಿ ರಾಜೇಂದ್ರ ಪ್ರತಾಪ್ ಸಿಂಗ್ ಅವರ ತಂದೆ ಭರತ್ ಸಿಂಗ್ ಗಾಂಧಿ ಅವರಿಗೆ ಸಂತಾಪ ಸೂಚಿಸಲು ಆಗಮಿಸಿದ್ದರು. ಈ ವೇಳೆ ಕಪ್ಪು ಭಾವುಟ ಪ್ರದರ್ಶಿಸಿದ ಸಮಾಜವಾದಿ ಪಕ್ಷದ ಕಾರ್ಯಕರ್ತ ಅರವಿಂದ್ ಯಾದವ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ಗುರುವಾರ ನಿಧನರಾಗಿದ್ದ ಭರತ್ ಸಿಂಗ್ ಗಾಂಧಿ ಅವರಿಗೆ ಯೋಗಿ ಆದಿತ್ಯನಾಥ್ ಅವರು ಅಂತಿಮ ನಮನ ಸಲ್ಲಿಸಿ, ಕುಟುಂಬಕ್ಕೆ ಸಾಂತ್ವಾನ ಹೇಳಿದರು.

