1984 ಸಿಖ್ ವಿರೋಧಿ ದಳ್ಳುರಿ: ನಾಳೆ ದೆಹಲಿ ಹೈಕೋರ್ಟ್ ತೀರ್ಪು ಪ್ರಕಟ?

1984ರಲ್ಲಿ ನಡೆದಿದ್ದ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಅವರನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ತೀರ್ಪನ್ನು ದೆಹಲಿ ಹೈಕೋರ್ಟ್ ನಾಳೆ ಪ್ರಕಟಿಸುವ ಸಾಧ್ಯತೆ ಇದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: 1984ರಲ್ಲಿ ನಡೆದಿದ್ದ ಸಿಖ್ ವಿರೋಧಿ ದಂಗೆಗೆ  ಸಂಬಂಧಿಸಿದಂತೆ  ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್  ಅವರನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ತೀರ್ಪನ್ನು  ದೆಹಲಿ ಹೈಕೋರ್ಟ್ ನಾಳೆ ಪ್ರಕಟಿಸುವ ಸಾಧ್ಯತೆ ಇದೆ.
ಸಿಖ್ ವಿರೋಧಿ ದಂಗೆ, ಸಂತ್ರಸ್ತರು ಹಾಗೂ ಆರೋಪಿಗಳ ಬಗ್ಗೆ ಸಿಬಿಐ  ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು  ಅಕ್ಟೋಬರ್ 29 ರಂದು ಪೂರ್ಣಗೊಳಿಸಿದ  ನ್ಯಾಯಾಧೀಶರಾದ ಎಸ್. ಮುರಳೀಧರ್ ಹಾಗೂ ವಿನೋದ್ ಗೋಯಲ್ ಅವರನ್ನೊಳಗೊಂಡ ನ್ಯಾಯಪೀಠ ತೀರ್ಪನ್ನು ಕಾಯ್ದಿರಿಸಿದೆ.
ಇಂದಿರಾಗಾಂಧಿ ಹತ್ಯೆ ನಡೆದ ನಂತರ 1984 ನವೆಂಬರ್ 1 ರಂದು ದೆಹಲಿಯ ಕಂಟೋನ್ಮೆಂಟ್ ಬಳಿಕ ರಾಜ್ ನಗರದಲ್ಲಿ ಒಂದೇ ಕುಟುಂಬದ ಐವರ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ  ಮಾಜಿ ಕಾಂಗ್ರೆಸ್ ಕೌನ್ಸಿಲರ್ ಬಲ್ವನ್ ಖೊಕಾರ್, ನಿವೃತ್ತ ನೌಕದಳ ಸಿಬ್ಬಂದಿ ಬಾಗ್ ಮಲ್ , ಗಿರ್ ದಾರಿ ಲಾಲ್   ಮತ್ತಿಬ್ಬರು  ದೋಷಿಗಳೆಂದು ವಿಚಾರಣಾ ನ್ಯಾಯಾಲಯ ತೀರ್ಪು ನೀಡಿದೆ.
ಈ ಪ್ರಕರಣದಲ್ಲಿ ಸಜ್ಜನ್ ಕುಮಾರ್ ಅವರನ್ನು ವಿಚಾರಣಾ ನ್ಯಾಯಾಲಯ ಖುಲಾಸೆಗೊಳಿಸಿದೆ. ಆದರೆ. ಖೊಕಾರ್, ಭಾಗ್ ಮಲ್ ಮತ್ತು ಲಾಲ್ ಗೆ ಜೀವಾಧಿ ಶಿಕ್ಷೆ ವಿಧಿಸಿದ್ದು, ಮಾಜಿ ಶಾಸಕ ಮಹೇಂದ್ರ ಯಾದವ್ ಮತ್ತು ಕಿಶನ್ ಕೊಕಾರ್ ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಅಪರಾಧಿಗಳು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಅಲ್ಲದೇ ಸಜ್ಜನ್ ಕುಮಾರ್ ಅವರ ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸಿಬಿಐ ಕೂಡಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com