

ಚೆನ್ನೈ: ತಮಿಳುನಾಡಿನ ಖ್ಯಾತ ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಅವರ ಮಕ್ಕಳ್ ನೀದಿ ಮೈಯಂ ಪಕ್ಷ ಕಾಂಗ್ರೆಸ್ ನೇತೃತ್ವದ ಡಿಎಂಕೆ ಜೊತೆ ವಿಲೀನವಾಗಲಿದೆ.
ಚೆನ್ನೈನಲ್ಲಿ ಇಂದು ನಡೆಯಲಿರುವ ಡಿಎಂಕೆ ಮಾಜಿ ನಾಯಕ ಕರುಣಾನಿಧಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಕಮಲ್ ಹಾಸನ್ ವಿಲೀನಕ್ಕೆ ಸಹಿ ಹಾಕಲಿದ್ದಾರೆ.
ಯುಪಿಎ ಅಧಿನಾಯಕಿ ಸೋನಿಯಾಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಕಮಲ್ ಹಾಸನ್ ಅವರ ಪಕ್ಷಕ್ಕೆ 2 ಲೋಕಸಭಾ ಕ್ಷೇತ್ರಗಳನ್ನು ಮೀಸಲಾಗಿಡಲಾಗಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.