ರಾಯ್ ಬರೇಲಿ: ಯುಪಿಎ ಅಧಿನಾಯಕಿ ಸೋನಿಯಾಗಾಂಧಿ ಪ್ರತಿನಿಧಿಸುವ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಇಂದು ಪ್ರಧಾನಿ ನರೇಂದ್ರಮೋದಿ ಹಮ್ಸಾಫರ್ ರೇಕ್ ಅತ್ಯಾಧುನಿಕ ರೈಲ್ವೆ ಕೋಚ್ ಕಾರ್ಖಾನೆಯ 900ನೇ ರೈಲ್ವೆ ಕೋಚ್ಗೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಈ ಕಾರ್ಖಾನೆಯನ್ನು ವಿಶ್ವದಲ್ಲಿಯೇ ಅತ್ಯಂತ ದೊಡ್ಡದಾದ ಕಾರ್ಖಾನೆ ಮಾಡುವುದು ಸರ್ಕಾರದ ಗುರಿಯಾಗಿದೆ ಎಂದರು.
ಹಿಂದಿನ ಕಾಂಗ್ರೆಸ್ ಸರ್ಕಾರ ಕಾರ್ಖಾನೆಯನ್ನು ನಿರ್ಲಕ್ಷಿಸಿದ್ದು, ಬಿಜೆಪಿ ಅಧಿಕಾರಕ್ಕೆ ಬಂದರೆ ಅದನ್ನು ಬದಲಾಯಿಸುವುದಾಗಿ ಹೇಳಿದರು.
Advertisement