ಅಂತೆಯೇ ಪ್ರಕರಣದ ಶಿಕ್ಷೆ ಪ್ರಮಾಣವನ್ನೂ ಕೂಡ ದೆಹಲಿ ಕೋರ್ಟ್ ಇಂದೇ ನೀಡಿದ್ದು, ದೋಷಿ ಸಜ್ಜನ್ ಕುಮಾರ್ ಗೆ ಜೀವಾವಧಿ ಶಿಕ್ಷೆ ನೀಡಿ ಕೋರ್ಟ್ ತೀರ್ಪು ಪ್ರಕಟಿಸಿದೆ. 1984ರ ಅಕ್ಟೋಬರ್ 31ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ಬಳಿಕ ದೆಹಲಿ ಕಂಟೋನ್ ಮೆಂಟ್ ಏರಿಯಾದಲ್ಲಿ ಗಲಭೆ ನಡೆದಿತ್ತು. ಈ ವೇಳೆ ಐವರನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಸ್ ಮುರಳೀಧರ್ ಹಾಗೂ ನ್ಯಾ. ವಿನೋದ್ ಗೋಯಲ್ ಅವರ ಪೀಠ ಇಂದು ತೀರ್ಪು ಪ್ರಕಟಿಸಿದೆ. ಅಂತೆಯೇ ಡಿಸೆಂಬರ್ 31ರ ಒಳಗೆ ಸಜ್ಜನ್ ಕುಮಾರ್ ಶರಣಾಗಬೇಕು ಎಂದು ಕೋರ್ಟ್ ಸೂಚನೆ ನೀಡಿದೆ.