ಪೆಥೈ ಚಂಡಮಾರುತ: ಆಂಧ್ರಪ್ರದೇಶ ಕರಾವಳಿ ತೀರದಲ್ಲಿ ಕಟ್ಟೆಚ್ಚರ ಘೋಷಣೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಚಂಡಮಾರುತ ಸೃಷ್ಟಿಯಾಗಿದ್ದು, ಈ ಚಂಡಮಾರುತ ಸೋಮವಾರ ಮಧ್ಯಾಹ್ನ ಆಂಧ್ರಪ್ರದೇಶದ ಕರಾವಳಿ ತೀರ ಪ್ರದೇಶಕ್ಕೆ ಅಪ್ಪಳಿಸಲಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಹೈದರಾಬಾದ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಚಂಡಮಾರುತ ಸೃಷ್ಟಿಯಾಗಿದ್ದು, ಈ ಚಂಡಮಾರುತ ಸೋಮವಾರ ಮಧ್ಯಾಹ್ನ ಆಂಧ್ರಪ್ರದೇಶದ ಕರಾವಳಿ ತೀರ ಪ್ರದೇಶಕ್ಕೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 
ಇಂದು ಮಧ್ಯಾಹ್ನದ ಬಳಿಕ ಪೆಥೈ ಚಂಡಮಾರುತ ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳಿದ್ದು, ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಸೂಚನೆ ನೀಡಿದ್ದಾರೆ. 
ಈಗಾಗಲೇ ನೂರಾರು ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಆಂಧ್ರಪ್ರದೇಶದ 9 ಕರಾವಳಿ ತೀರ ಪ್ರದೇಶಗಳಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಮೀನುಗಾರರು ಸಮುದ್ರಕ್ಕಿಳಿಯದಂತೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಅಲ್ಲಲ್ಲಿ ವಿಪತ್ತಿ ನಿರ್ವಹಣಾ ತಂಡವನ್ನು ನಿಯೋಜನೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. 
ಈಗಾಗಲೇ ಆಂಧ್ರಪ್ರದೇಶದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿಯೇ ಇದ್ದು, ಅಪಾಯದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com