ರಫೇಲ್ ಒಪ್ಪಂದ ಕುರಿತು ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ಇಲ್ಲ: ಅರುಣ್ ಜೇಟ್ಲಿ

ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ನಡೆದಿದೆ ಎನ್ನಲಾದ ಹಗರಣ ತನಿಖೆಯನ್ನು ಜಂಟಿ ಸಂಸದೀಯ ಸಮಿತಿಗೆ ವಹಿಸಬೇಕು ಎಂಬ ಕಾಂಗ್ರೆಸ್ ಆಗ್ರಹವನ್ನು ಹಣಕಾಸು ಸಚಿವ ಅರುಣ್ ಜೇಟ್ಲಿಯವರು ತಳ್ಳಿ ಹಾಕಿದ್ದಾರೆ...
ಹಣಕಾಸು ಸಚಿವ ಅರುಣ್ ಜೇಟ್ಲಿ
ಹಣಕಾಸು ಸಚಿವ ಅರುಣ್ ಜೇಟ್ಲಿ
ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ನಡೆದಿದೆ ಎನ್ನಲಾದ ಹಗರಣ ತನಿಖೆಯನ್ನು ಜಂಟಿ ಸಂಸದೀಯ ಸಮಿತಿಗೆ ವಹಿಸಬೇಕು ಎಂಬ ಕಾಂಗ್ರೆಸ್ ಆಗ್ರಹವನ್ನು ಹಣಕಾಸು ಸಚಿವ ಅರುಣ್ ಜೇಟ್ಲಿಯವರು ತಳ್ಳಿ ಹಾಕಿದ್ದಾರೆ. 
ಈ ಕುರಿತಂತೆ ನಿನ್ನೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ಬ್ಲಾಗ್ ನಲ್ಲಿ ವಿಸ್ತೃತವಾಗಿ ಬರೆದಿರುವ ಅವರು, ರಫೇಲ್ ಒಪ್ಪಂದ ಕುರಿತು ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸುವುದಿಲ್ಲ. ರಫೇಲ್ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಕ್ಲೀನ್ ಚಿಟ್ ನೀಡಿದ ಬಳಿಕ ಮಹಾಲೇಖಪಾಲರ ಅಭಿಪ್ರಾಯವು ಪ್ರಾಧಾನ್ಯತೆ ಪಡೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. 
ಇದೇ ವೇಳೆ ಸಂಸತ್ತಿನ 4 ದಿನದ ಅಧಿವೇಶನ ಚರ್ಚೆಯಿಲ್ಲದೆ ವ್ಯರ್ಥವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮತ್ತೊಂದೆಡೆ ರಫೇಲ್ ಒಪ್ಪಂದ ಕುರಿತ ಸುಪ್ರೀಂಕೋರ್ಟ್ ತೀರ್ಪಿನಿಂದ ಉಂಟಾಗಿರುವ ಗೊಂದಲ ಹಿನ್ನಲೆಯಲ್ಲಿ ಅಟಾರ್ನಿ ಜನರಲ್ ಹಾಗೂ ಮಹಾಲೇಖಪಾಲರನ್ನು ವಿಚಾರಣೆಗೆ ಕರೆಸುವ ಸಂಸತ್ತಿನ ಸಾರ್ವಜನಿಕ ಲೆಕ್ಕ ಪತ್ರ ಸಮಿತಿಯ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಯತ್ನಕ್ಕೆ ಹಿನ್ನಡೆಯಾಗಿದೆ. 
ಅಟಾರ್ನಿ ಜನರಲ್ ಹಾಗೂ ಮಹಾಲೇಖಪಾಲಗೆ ಸಮನ್ಸ್ ನೀಡುವ ಖರ್ಗೆ ಪ್ರಸ್ತಾಪಕ್ಕೆ ಸಮಿತಿಯಲ್ಲಿ ಆಡಳಿತಾರೂಢ ಮತ್ತು ಪ್ರತಿಪಕ್ಷಗಳ ಸಮಿತಿಯಲ್ಲಿ ಆಡಳಿತಾರೂಢ ಮತ್ತು ಪ್ರತಿಪಕ್ಷಗಳ ಹೆಚ್ಚಿನ ಸದಸ್ಯರೂ ಕೂಡ ಬೆಂಬಲ ವ್ಯಕ್ತಪಡಿಸಿಲ್ಲ. ಹೀಗಾಗಿ ಖರ್ಗೆ ಪ್ರಸ್ತಾಪ ಬಿದ್ದುಹೋಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com