ವಿವಿಐಪಿ ಹೆಲಿಕಾಪ್ಟರ್ ಪ್ರಕರಣ: ದುಬೈ ಮೂಲದ ಆರೋಪಿಯಿಂದ ನಿರೀಕ್ಷಣಾ ಜಾಮೀನು ಅರ್ಜಿ

3600 ಕೋಟಿ ರೂ. ಮೊತ್ತದ ವಿವಿಐಪಿ ಹೆಲಿಕಾಪ್ಟರ್ ಹಗರಣದಲ್ಲಿ ಹಣ ವರ್ಗಾವಣೆ ಪ್ರಕರಣದ ಆರೋಪಿ ದುಬೈ ಮೂಲದ ಉದ್ಯಮಿಯೊಬ್ಬರು ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: 3600 ಕೋಟಿ ರೂ. ಮೊತ್ತದ ವಿವಿಐಪಿ ಹೆಲಿಕಾಪ್ಟರ್ ಹಗರಣದಲ್ಲಿ ಹಣ ವರ್ಗಾವಣೆ ಪ್ರಕರಣದ ಆರೋಪಿ ದುಬೈ ಮೂಲದ ಉದ್ಯಮಿಯೊಬ್ಬರು ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ದುಬೈನ ಯುಹೆಚ್ ವೈ ಸಕ್ಸೆನಾ ಮತ್ತು ಮ್ಯಾಟ್ರಿಕ್ ಹೊಲ್ಡಿಂಗ್ಸ್  ಸಂಸ್ಥೆಯ ನಿರ್ದೇಶಕ  ರಾಜೀವ್ ಸಕ್ಸೆನಾ, ತಮ್ಮ ವಕೀಲರ ಮೂಲಕ ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ಮುಂದೆ  ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಡಿಸೆಂಬರ್ 24 ರೊಳಗೆ ಜಾರಿ ನಿರ್ದೇಶನಾಲಯದಿಂದ ನ್ಯಾಯಾಲಯ ಪ್ರತಿಕ್ರಿಯೆ ಬಯಸಿದೆ. ಮುಂದಿನ ವರ್ಷ ಈ ಪ್ರಕರಣದ ವಿಚಾರಣೆ ನಡೆಯಲಿದೆ.

ಈ ಪ್ರಕರಣದಲ್ಲಿ ಸಕ್ಸೆನಾ ವಿರುದ್ಧ ನ್ಯಾಯಾಲಯ ಈಗಾಗಲೇ  ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com