ಪಕ್ಷದ ಮೂಲಗಳ ಪ್ರಕಾರ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಸಜ್ಜನ್ ಕುಮಾರ್, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ. "ನನ್ನ ವಿರುದ್ಧ ದೆಹಲಿ ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ನಾನು ಈ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ" ಎಂದು ರಾಹುಲ್ ಗಾಂಧಿಗೆ ಬರೆದ ಪತ್ರದಲ್ಲಿ ಸಜ್ಜನ್ ಕುಮಾರ್ ತಿಳಿಸಿದ್ದಾರೆ.