ಮೊದಲು ನಾಲ್ಕನೇ ಅಂತಸ್ತಿನಲ್ಲಿ ಕಾಣಿಸಿಕೊಂಡ ಬೆಂಕಿ ನಂತರ ಇತರ ಅಂತಸ್ತುಗಳಿಗೂ ವ್ಯಾಪಿಸಿದೆ. ಇನ್ನು ಈ ವರೆಗೂ ಆಸ್ಪತ್ರೆಯಲ್ಲಿನ ಸಿಬ್ಬಂದಿಗಳೂ ಸೇರಿದಂತೆ ಸುಮಾರು 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಈ ಪೈಕಿ ಹಲವರ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಭೀತಿ ಎದುರಾಗಿದೆ. ಕಟ್ಟಡದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, 8ಕ್ಕೂ ಅಧಿಕ ವಾಹನಗಳಲ್ಲಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ.