ರಾಹುಲ್ ಪ್ರಧಾನಿ ಅಭ್ಯರ್ಥಿ ಹೇಳಿಕೆ ಸಮರ್ಥಿಸಿಕೊಂಡ ಸ್ಟಾಲಿನ್, ತಮ್ಮ ಪ್ರಸ್ತಾವ ಬೆಂಬಲಿಸುವಂತೆ ಮನವಿ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಎಂಬ ಹೇಳಿಕೆಯನ್ನು ಡಿಎಂಕೆ ಅಧ್ಯಕ್ಷ ಸ್ಟಾಲಿನ್ ಸಮರ್ಥಿಸಿಕೊಂಡಿದ್ದಾರೆ.
ರಾಹುಲ್ ಗಾಂಧಿ, ಸ್ಟಾಲಿನ್
ರಾಹುಲ್ ಗಾಂಧಿ, ಸ್ಟಾಲಿನ್
Updated on: 

ಚೆನ್ನೈ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಎಂಬ ಹೇಳಿಕೆಯನ್ನು ಡಿಎಂಕೆ ಅಧ್ಯಕ್ಷ ಸ್ಟಾಲಿನ್ ಸಮರ್ಥಿಸಿಕೊಂಡಿದ್ದಾರೆ. ಕೇಂದ್ರದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ತಳ್ಳುವ ಸಾಮರ್ಥ್ಯ ರಾಹುಲ್ ಗಾಂಧಿಗೆ ಇದ್ದು, ಎಲ್ಲಾ ಜಾತ್ಯಾತೀತ ಪಕ್ಷಗಳು ತಮ್ಮ ಪ್ರಸ್ತಾವವನ್ನು ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಸ್ಟಾಲಿನ್ ಹೇಳಿಕೆ ಬಗ್ಗೆ ಪ್ರತಿಪಕ್ಷಗಳ ನಾಯಕರಲ್ಲಿ ಬಗೆ ಬಗೆಯ ಚರ್ಚೆಯಾಗುತ್ತಿರುವ ಬೆನ್ನಲ್ಲೇ, ಯಾರು ನಾಯಕತ್ವ ವಹಿಸಬೇಕು ಎಂಬ ಬಗ್ಗೆ ಸಮಾನ ಮನಸ್ಕ ಪಕ್ಷಗಳು ಚರ್ಚೆ ನಡೆಸಬೇಕಾಗುತ್ತದೆ ಎಂದು ಸ್ಟಾಲಿನ್ ಹೇಳಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಚರ್ಚೆ ಮೂಲಕ ಮಾತ್ರ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿದೆ. ಇದರಿಂದ ಒಳ್ಳೇಯ ರೀತಿಯ ಪ್ರತಿಕ್ರಿಯೆ ಹೊರಬರುತ್ತದೆ ಎಂದು ಸ್ಟಾಲಿನ್  ತಮ್ಮ ಪಕ್ಷದ ಕಾರ್ಯಕರ್ತರಿಗೆ ತಡರಾತ್ರಿ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಜಾಪ್ರಭುತ್ವದ ರಕ್ಷಣೆಗಾಗಿ  ರಾಹುಲ್ ಗಾಂಧಿ ಅವರ ಕೈಯನ್ನು  ಇತರ ಪ್ರತಿಪಕ್ಷಗಳು ಬಲಪಡಿಸಬೇಕಾಗಿದೆ ಎಂದು ಸ್ಟಾಲಿನ್ ಮನವಿ ಮಾಡಿಕೊಂಡಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ತಳ್ಳಲು ಎಲ್ಲಾ ಪ್ರತಿಪಕ್ಷಗಳು ಒಂದಾಗಬೇಕಿದೆ ಎಂದು ಹೇಳಿರುವ ಡಿಎಂಕೆ ಮುಖ್ಯಸ್ಥ, ಜಾತ್ಯಾತೀತ ಪಕ್ಷಗಳ ಪೈಕಿ ಪ್ರಧಾನಿ ಹುದ್ದೆಗೆ ರಾಹುಲ್ ಗಾಂಧಿ ಸೂಕ್ತ ವ್ಯಕ್ತಿ ಎಂದಿದ್ದಾರೆ.

ರಾಜಸ್ತಾನ, ಮಧ್ಯಪ್ರದೇಶ, ಛತ್ತೀಸ್ ಗಡ ಚುನಾವಣೆಯಲ್ಲಿ ಕೇಸರಿ ಪಡೆಯನ್ನು  ಕಾಂಗ್ರೆಸ್ ಸೋಲಿಸಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವ ಸಾಮರ್ಥ್ಯ ರಾಹುಲ್ ಗಾಂಧಿ ಅವರಿಗೆ ಇದೆ ಎಂದು ಸ್ಟಾಲಿನ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com