ಗುಜರಾತ್​​, ಮುಜಾಫರ್ ​​ನಗರ ಗಲಭೆಯ ಹಿಂದಿನ ಆರೋಪಿಗಳಿಗೂ ಶಿಕ್ಷೆಯಾಗಲಿ: ಕೇಜ್ರಿವಾಲ್

1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಅವರಿಗೆ ದೆಹಲಿ ಕೋರ್ಟ್ ಜೀವಾವಧಿ ಶಿಕ್ಷೆ....
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಅವರಿಗೆ ದೆಹಲಿ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿರುವುದನ್ನು ಸ್ವಾಗತಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಅದೇ ರೀತಿ ಗುಜರಾತ್​​, ಮುಜಾಫರ್ ​​ನಗರ ಗಲಭೆಯ ಹಿಂದಿನ ಆರೋಪಿಗಳಿಗೂ ಶಿಕ್ಷೆಯಾಗಬೇಕು ಎಂದು ಮಂಗಳವಾರ ಒತ್ತಾಯಿಸಿದ್ದಾರೆ.
ಇಂದು ಎಎನ್ ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ದೆಹಲಿ ಸಿಎಂ, ಸಜ್ಜನ್ ಕುಮಾರ್ ಗೆ ಶಿಕ್ಷೆಯಾಗಿರುವುದು ಪ್ರಜಾಪ್ರಭುತ್ವಕ್ಕೆ ಸಂದ ಜಯ. ಅಪರಾಧಿಗೆ  ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ. ಸಿಖ್ ಹತ್ಯಾಕಾಂಡದ ಹಾಗೆಯೇ ಗುಜರಾತ್ ಗಲಭೆ ಮತ್ತು ಮುಜಾಫರ್ ​​ನಗರ ಗಲಭೆಯಲ್ಲಿ ಭಾಗಿಯಾಗಿರುವ ದೊಡ್ಡ ದೊಡ್ಡ ನಾಯಕರಿಗೂ ಜೀವಾವಧಿ ಶಿಕ್ಷೆಯಾಗಲಿ. ಇದಕ್ಕೆ ನ್ಯಾಯಾಂಗ ಮುಂದಾಗಬೇಕು ಎಂದಿದ್ದಾರೆ.
34 ವರ್ಷಗಳ ಬಳಿಕ ಸಿಖ್ ಸಮುದಾಯಕ್ಕೆ ನ್ಯಾಯ ಸಿಕ್ಕಿದೆ. ಈ ಹೈಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಇದೇ ರೀತಿಯಲ್ಲಿ 2002 ರಲ್ಲಿ ಗುಜರಾತ್ ಗಲಭೆ, 2013 ರಲ್ಲಿ ಮಜಾಫರ್ ನಗರ ಗಲಭೆ ನಡೆಸಿದ ದೊಡ್ಡ ನಾಯಕರಿಗೂ ಶಿಕ್ಷೆಯಾಗಬೇಕು ಎಂದು ಕೇಜ್ರಿವಾಲ್ ಒತ್ತಾಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com