ಮಧ್ಯಪ್ರದೇಶ, ಛತ್ತೀಸ್ ಗಢದ ಬೆನ್ನಲ್ಲೇ ರಾಜಸ್ಥಾನ ಸರ್ಕಾರದಿಂದ 2 ಲಕ್ಷ ರೂ ವರೆಗಿನ ರೈತರ ಸಾಲ ಮನ್ನಾ!

ಮಧ್ಯಪ್ರದೇಶ, ಛತ್ತೀಸ್ ಗಢ ಸರ್ಕಾರಗಳು ರೈತರ ಸಾಲ ಮನ್ನಾ ಘೋಷಣೆ ಮಾಡಿರುವ ಬೆನ್ನಲ್ಲೇ ರಾಜಸ್ಥಾನ ಸರ್ಕಾರ 2 ಲಕ್ಷ ರೂಪಾಯಿ ವರೆಗಿನ ರೈತರ ಸಾಲ ಮನ್ನಾ ಮಾಡಿದೆ.
ರಾಜಸ್ಥಾನ ಉಪಮುಖ್ಯಮಂತ್ರಿ ಸಚಿನ್ ಪೈಲಟ್, ಮುಖ್ಯಮಂಟ್ರಿ ಅಶೋಕ್ ಗೆಹ್ಲೋಟ್
ರಾಜಸ್ಥಾನ ಉಪಮುಖ್ಯಮಂತ್ರಿ ಸಚಿನ್ ಪೈಲಟ್, ಮುಖ್ಯಮಂಟ್ರಿ ಅಶೋಕ್ ಗೆಹ್ಲೋಟ್
Updated on
ಜೈಪುರ: ಮಧ್ಯಪ್ರದೇಶ, ಛತ್ತೀಸ್ ಗಢ ಸರ್ಕಾರಗಳು ರೈತರ ಸಾಲ ಮನ್ನಾ ಘೋಷಣೆ ಮಾಡಿರುವ ಬೆನ್ನಲ್ಲೇ ರಾಜಸ್ಥಾನ ಸರ್ಕಾರ 2 ಲಕ್ಷ ರೂಪಾಯಿ ವರೆಗಿನ ರೈತರ ಸಾಲ ಮನ್ನಾ ಮಾಡಿದೆ. 
ಅಧಿಕಾರ ವಹಿಸಿಕೊಂಡ 2 ದಿನಗಳಲ್ಲಿ ಕಾಂಗ್ರೆಸ್ ರಾಜಸ್ಥಾನ ರಾಜ್ಯದ ರೈತರ ಸಾಲ ಮನ್ನಾ ಮಾಡಿದ್ದು, ಸರ್ಕಾರದ ಬೊಕ್ಕಸಕ್ಕೆ 18,000 ಕೋಟಿ ರೂಪಾಯಿ ಹೆಚ್ಚಿನ ಹೊರೆ ಬೀಳಲಿದೆ. ಅಧಿಕಾರಕ್ಕೆ ಬಂದರೆ 10 ದಿನಗಳಲ್ಲಿ ರೈತರ ಸಾಲ ಮನ್ನಾ ಮಾಡುವುದು ಪಂಚ ರಾಜ್ಯಗಳ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನ ಪ್ರಣಾಳಿಕೆಯ ಅಂಶವಾಗಿತ್ತು. ಚುನಾವಣೆಗೂ ಮುನ್ನ ಪಂಜಾಬ್ ನ ಕಾಂಗ್ರೆಸ್ ಸರ್ಕಾರ ಹಾಗೂ ಕರ್ನಾಟಕದಲ್ಲಿನ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ರೈತರ ಸಾಲ ಮನ್ನಾ ಘೋಷಣೆ ಮಾಡಿದ್ದವು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com