ಬಿಜೆಪಿಯ 3 ರಥ ಯಾತ್ರೆಗಳಿಗೆ ಕೋಲ್ಕತಾ ಹೈಕೋರ್ಟ್ ಅನುಮತಿ

ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಮೂರು ರಥ ಯಾತ್ರೆಗಳನ್ನು ನಡೆಸಲು ಗುರುವಾರ ಕೋಲ್ಕತಾ ಹೈಕೋರ್ಟ್ ಅನುಮತಿ ನೀಡಿದೆ.
ಅಮಿತ್ ಶಾ
ಅಮಿತ್ ಶಾ
ಕೋಲ್ಕತಾ: ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಮೂರು ರಥ ಯಾತ್ರೆಗಳನ್ನು ನಡೆಸಲು ಗುರುವಾರ ಕೋಲ್ಕತಾ ಹೈಕೋರ್ಟ್ ಅನುಮತಿ ನೀಡಿದೆ. ಅಲ್ಲದೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಜಿಲ್ಲಾ ಆಡಳಿತಕ್ಕೆ ಸೂಚಿಸಿದೆ.
ರಾಜ್ಯದಲ್ಲಿ ರಥ ಯಾತ್ರೆಗೆ ಅನುಮತಿ ನಿರಾಕರಿಸಿದ್ದ ಪಶ್ಚಿಮ ಬಂಗಾಳ ಸರ್ಕಾರದ ಆದೇಶ ಪ್ರಶ್ನಿಸಿ ಕಳೆದ ಸೋಮವಾರ ಬಿಜೆಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಕೆಲ ಷರತ್ತುಗಳನ್ನು ವಿಧಿಸಿ ಯಾತ್ರೆಗೆ ಅನುಮತಿ ನೀಡಿ ಎಂದು ಸರ್ಕಾರಕ್ಕೆ ಸೂಚಿಸಿದೆ.
ಈ ಹಿಂದೆ ಕೂಚ್‌ ಬಿಹಾರ್‌ನಿಂದ ಆರಂಭವಾಗಬೇಕಿದ್ದ ಭಾರತೀಯ ಜನತಾ ಪಕ್ಷ(ಬಿಜೆಪಿ)ದ 'ರಥ ಯಾತ್ರೆ'ಗೆ ಕೋಲ್ಕತಾ ಹೈಕೋರ್ಟ್‌ ಏಕ ಸದಸ್ಯ ಪೀಠ ಅನುಮತಿ ನಿರಾಕರಿಸಿತ್ತು. 
ಏಕ ಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಬಿಜೆಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ವಿಭಾಗಯ ಪೀಠ, ರಥ ಯಾತ್ರೆಗೆ ಅನುಮತಿ ನೀಡುವ ಕುರಿತು ಬಿಜೆಪಿಯ ಮೂವರು ಸದಸ್ಯರ ತಂಡದೊಂದಿಗೆ ಚರ್ಚಿಸಿ ಡಿಸೆಂಬರ್ 14ರೊಳಗೆ ಅಂತಿಮ ನಿರ್ಧಾರಕ್ಕೆ ಬನ್ನಿ ಎಂದು ಪಶ್ಚಿಮ ಬಂಗಾಳ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾ ನಿರ್ದೇಶಕರಿಗೆ ಮತ್ತು ಗೃಹ ಕಾರ್ಯದರ್ಶಿಗೆ ಸೂಚಿಸಿತ್ತು.
ರಥ ಯಾತ್ರೆಯಿಂದ ಕೋಮುಗಲಭೆ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ರಥ ಯಾತ್ರೆಗೆ ಅನುಮತಿ ನೀಡಲು ನಿರಾಕರಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com