ಐಆರ್ಸಿಟಿಸಿ ಹಗರಣ: ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಗೆ ಮದ್ಯಂತರ ಜಾಮೀನು

ಭಾರತೀಯ ರೈಲ್ವೆ ಕ್ಯಾಟರಿಂಗ್ ಅಂಡ್ ಟೂರಿಸಂ ಕಾರ್ಪೊರೇಶನ್ (ಐಆರ್ಟಿಟಿಸಿ) ನ ಎರಡು ಪ್ರಕರಣಕ್ಕೆ ಸಂಬಂಧಿಸಿ ದೆಹಲಿಯ ಪಟಿಯಾಲಾ ಹೌಸ್‌ ಕೋರ್ಟ್‌ ಆರ್‌ಜೆಡಿ ಮುಖ್ಯಸ್ಥ....
ಲಾಲೂ ಪ್ರಸಾದ್ ಯಾದವ್
ಲಾಲೂ ಪ್ರಸಾದ್ ಯಾದವ್
Updated on
ನವದೆಹಲಿ:  ಭಾರತೀಯ ರೈಲ್ವೆ ಕ್ಯಾಟರಿಂಗ್ ಅಂಡ್ ಟೂರಿಸಂ ಕಾರ್ಪೊರೇಶನ್ (ಐಆರ್ಟಿಟಿಸಿ) ನ ಎರಡು ಪ್ರಕರಣಕ್ಕೆ ಸಂಬಂಧಿಸಿ ದೆಹಲಿಯ ಪಟಿಯಾಲಾ ಹೌಸ್‌ ಕೋರ್ಟ್‌ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಸಿಬಿಐ ಮತ್ತು ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಈ ಪ್ರಕರಣದಲ್ಲಿ ಲಾಲೂ ಅವರಿಗೆ ಜನವರಿ 19ರವರೆ ಮಧ್ಯಂತರ ಜಾಮೀನು ನೀಡಿದೆ.
ಬಹುಕೋಟಿ ಮೇವು ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಆಲ್ಲೂ ಯಾದವ್ ಅವರನ್ನು ವಿಡಿಯೋ ಕಾನ್ಫರೆನ್ಸಿಂಗ್‌ ಮೂಲಕ ನ್ಯಾಯಾಲಯದಲ್ಲಿ ಹಾಜರು ಪಡಿಸಲಾಗಿತ್ತು. ಈ ವೇಳೆ ವಿಶೇಷ ನ್ಯಾಯಾಧೀಶ ಅರುಣ್ ಬಾರದ್ವಾಜ್ ಪ್ರಕರಣದ ವಿಚಾರಣೆಯನ್ನು ಜನವರಿ 19ಕ್ಕೆ ಮುಂದೂಡಿದ್ದಾರೆ.
ಇದೇ ವೇಳೆ ಎರಡೂ ಪ್ರಕರಣದಲ್ಲಿ ಜಾಮೀನು ಕೋರಿ ಲಾಲೂ ಪ್ರಸಾದ್ ಸಲ್ಲಿಸಿದ್ದ ಅರ್ಜಿಗೆ ಸಿಬಿಐ ಹಾಗೂ ಇಡಿ ಪ್ರಕ್ತಿಕ್ರಿಯೆ ಸಲ್ಲಿಸಿದೆ.
ಖಾಸಗಿ ಸಂಸ್ಥೆಗೆ ಎರಡು ಐಆರ್ಟಿಟಿಸಿಹೋಟೆಲ್ ಗಳನ್ನು ಗುತ್ತಿಗೆ ನಿಡಿದ್ದ ಸಂಬಂಧ ಅಕ್ರಮ ನಡೆದಿದೆ ಎಂದುಇಡಿ ಹಾಗೂ ಸಿಬಿಐ ಆರೋಪಿಸಿದ್ದು ಈ ಸಂಬಂಧ ಪ್ರಕರಣ ದಾಕಲಿಸಿಕೊಂಡಿವೆ.
ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ತೇಜಸ್ವಿ ಸಹ ಐಆರ್ಟಿಟಿಸಿ ಪ್ರಕರಣದ ವಿಚಾರಣೆಗಾಗಿ ಕೋರ್ಟ್ ಗೆ ಹಾಜರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com