ಬಿಜೆಪಿ ರಥಯಾತ್ರೆಗೆ ಅನುಮತಿ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ 'ಮಮತಾ' ಸರ್ಕಾರ

ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಮೂರು ರಥ ಯಾತ್ರೆಗಳನ್ನು ನಡೆಸಲು ಗುರುವಾರ ಕೋಲ್ಕತಾ ಹೈಕೋರ್ಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ...
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
ಕೊಲ್ಕೋತಾ: ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಮೂರು ರಥ ಯಾತ್ರೆಗಳನ್ನು ನಡೆಸಲು ಗುರುವಾರ ಕೋಲ್ಕತಾ ಹೈಕೋರ್ಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಮೇಲ್ಮನವಿ ಸಲ್ಲಿಸಿದೆ.
ಮುಖ್ಯ ನ್ಯಾಯಮೂರ್ತಿ ದೇಬಾಶಿಸ್ ಕಾರಗುಪ್ತ ಹಾಗೂ ಶಂಪಾ ಸರ್ಕಾರ್ ಅವರನ್ನೊಳಗೊಂಡ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಿರುವ ಪಶ್ಚಿಮ ಬಂಗಾಳ ಸರ್ಕಾರ ಕೂಡಲೇ ಅರ್ಜಿ ವಿಚಾರಣೆ ನಡೆಸುವಂತೆ ಕೋರಿದೆ.
ಸರ್ಕಾರದ ಮನವಿಗೆ ಸ್ಪಂದಿಸಿರುವ ಕೋರ್ಟ್, ವಿಚಾರಣೆ ಆರಂಭವಾಗುವ ಮುನ್ನ ಸರ್ಕಾರ ಸಲ್ಲಿಸಿರುವ ಅಪೀಲು ಕಾಪಿಯ ಪ್ರತಿಗಳನ್ನು ಬಿಜೆಪಿಗೆ ತಲುಪಿಸುವಂತೆ ಸೂಚಿಸಿದೆ. 
ಪಶ್ಚಿಮ ಬಂಗಾಳದಲ್ಲಿ ರಥ ಯಾತ್ರೆಗೆ ಅನುಮತಿ ನಿರಾಕರಿಸಿದ್ದ ಪಶ್ಚಿಮ ಬಂಗಾಳ ಸರ್ಕಾರದ ಆದೇಶ ಪ್ರಶ್ನಿಸಿ ಕಳೆದ ಸೋಮವಾರ ಬಿಜೆಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಕೆಲ ಷರತ್ತುಗಳನ್ನು ವಿಧಿಸಿ ಯಾತ್ರೆಗೆ ಅನುಮತಿ ನೀಡಿ ಎಂದು ಸರ್ಕಾರಕ್ಕೆ ಗುರುವಾರ ಸೂಚಿಸಿತ್ತು.
ರಥ ಯಾತ್ರೆಯಿಂದ ಕೋಮುಗಲಭೆ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ರಥ ಯಾತ್ರೆಗೆ ಅನುಮತಿ ನೀಡಲು ನಿರಾಕರಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com