ನೆರೆ ರಾಷ್ಟ್ರದ ವ್ಯವಹಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: ಪಾಕ್'ಗೆ ಭಾರತ

ನೆರೆ ರಾಷ್ಟ್ರಗಳ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ಮೊದಲು ನಿಮ್ಮ ಕೆಲಸವನ್ನು ನೀವು ನೋಡಿಕೊಳ್ಳಿ ಎಂದು ಪಾಕಿಸ್ತಾನಕ್ಕೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ನವದೆಹಲಿ: ನೆರೆ ರಾಷ್ಟ್ರಗಳ ವ್ಯವಹಾರಗಳಲ್ಲಿ ಮೂಗು ತೂರಿಸುವ ಬದಲು ಮೊದಲು ನಿಮ್ಮ ಕೆಲಸವನ್ನು ನೀವು ನೋಡಿಕೊಳ್ಳಿ ಎಂದು ಪಾಕಿಸ್ತಾನಕ್ಕೆ ಭಾರತ ತಿರುಗೇಟು ನೀಡಿದೆ. 
ಕಾಶ್ಮೀರದ ಪುಲ್ವಾಮದಲ್ಲಿ 7 ನಾಗರೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ವ್ಯವಹಾರಗಳ ವಕ್ತಾರ ರವೀಶ್ ಕುಮಾರ್ ಅವರು, ನೆರೆ ರಾಷ್ಟ್ರದ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ಪಾಕಿಸ್ತಾನ ತನ್ನ ಕೆಲಸವನ್ನು ತಾನು ನೋಡಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ. 
ತನ್ನ ಮಣ್ಣಿನಲ್ಲಿಯೇ ಉಗ್ರರು ಷಡ್ಯಂತ್ರಗಳನ್ನು ರೂಪಿಸುತ್ತಿದ್ದರೂ ಪಾಕಿಸ್ತಾನ ಈ ವರೆಗೂ ಯಾವುದೇ ರೀತಿಯ ಕ್ರಮಗಳನ್ನು ಕೈಗೊಂಡಿಲ್ಲ. ಭಯೋತ್ಪಾದನೆ ವಿರುದ್ಧ ಕ್ರಮ ಕೈಗೊಳ್ಳದ ರಾಷ್ಟ್ರದಿಂದ ಬರುವ ಹೇಳಿಕೆಗಳು ಅದರ ಪ್ರಮಾಣಿಕತೆ ಹಾಗೂ ದ್ವಂದ್ವತೆಯನ್ನು ತೋರಿಸುತ್ತದೆ ಎಂದು ತಿಳಿಸಿದ್ದಾರೆ. 
ಭಯೋತ್ಪಾದನೆಗೆ ಕಡಿವಾಣ ಹಾಕುವಂತೆ ಬಹಳ ಹಿಂದಿನಿಂದಲೂ ನಾವು ಆಗ್ರಹಿಸುತ್ತಲೇ ಬಂದಿದ್ದೇವೆ. ನಮ್ಮ ನೆಲದಲ್ಲಿ ಉಗ್ರರು ಷಡ್ಯಂತ್ರಗಳನ್ನು ರೂಪಿಸುತ್ತಿದ್ದಾರೆ. ನಿಮ್ಮ ನೆಲದಿಂದ ಬಂದ ಉಗ್ರರೇ ನಮ್ಮ ನೆಲದಲ್ಲಿ ದಾಳಿಗಳನ್ನು ನಡೆಸುತ್ತಿದ್ದಾರೆ. ಆದರೂ ಪಾಕಿಸ್ತಾನ ಯಾವುದೇ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಕಿಡಿಕಾರಿದ್ದಾರೆ. 

ಕಾಶ್ಮೀರದ ಪುಲ್ವಾಮದಲ್ಲಿ 7 ನಾಗರೀಕರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದ ಇಮ್ರನ್ ಖಾನ್ ಅವರು, ವಿಶ್ವಸಂಸ್ಥೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸುವುದಾಗಿ ಬೆದರಿಕೆ ಹಾಕಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com