ಅತ್ಯಾಚಾರ ಪ್ರಕರಣ: ಆರ್ಜೆಡಿ ಶಾಸಕ ರಾಜ್ ಬಲ್ಲಭ್ ಪ್ರಸಾದ್ ಗೆ ಜೀವಾವಧಿ ಶಿಕ್ಷೆ
ಸಂಸದರು ಹಾಗೂ ಶಾಸಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಆಲಿಸುವ ವಿಶೇಷ ನ್ಯಾಯಾಲಯ ಇಂದು (ಶುಕ್ರವಾರ) ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತೀರ್ಪು ಪ್ರಕಟಿಸಿದ್ದು ಅಮಾನತುಗೊಂಡಿದ್ದ ಆರ್ಜೆಡಿ....
ಪಾಟ್ನಾ: ಸಂಸದರು ಹಾಗೂ ಶಾಸಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಆಲಿಸುವ ವಿಶೇಷ ನ್ಯಾಯಾಲಯ ಇಂದು (ಶುಕ್ರವಾರ) ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತೀರ್ಪು ಪ್ರಕಟಿಸಿದ್ದು ಅಮಾನತುಗೊಂಡಿದ್ದ ಆರ್ಜೆಡಿ ಶಾಸಕ ರಾಜ್ ಬಲ್ಲಭ್ ಪ್ರಸಾದ್ ಯಾದವ್ ಹಾಗೂ ಇನ್ನಿಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಇದೇ ಪ್ರಕರಣದಲ್ಲಿ ಭಾಗಿಗಳಾಗಿದ್ದ ಇನ್ನೂ ಮೂವರಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ವಿಶೇಷ ನ್ಯಾಯಾಧೀಶ ಪರಶುರಾಂ ಸಿಂಗ್ ಯಾದವ್ ಈ ತೀರ್ಪು ಪ್ರಕಟಿಸಿದ್ದು ಶಾಸಕ ಯಾದವ್ ಅವರನ್ನು ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ವಿಭಾಗಗಳು ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಕೋಸ್ಕೋ) ಕಾಯ್ದೆ ಅಡಿಯಲ್ಲಿ ಶಿಕ್ಷೆಗೆ ಗುರಿಪಡಿಸಿದ್ದಾರೆ. ಅಲ್ಲದೆ 50,000 ದಂಡ ವಿದಿಸಲಾಗಿದೆ.
ಸುಲೇಖಾ ದೇವಿ ಹಾಗೂ ರಾಧಾದೇವಿ ಎಂಬ ಇನ್ನಿಬ್ಬರು ಅಪರಾಧಿಗಳಿಗೆ ಸಹ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿ ತೀರ್ಪು ನೀಡಿದೆ.