ಮುಂಬೈ: ನಿರ್ಮಾಣ ಹಂತದ ಕಟ್ಟಡ ಕುಸಿತ, ಮೂವರು ದುರ್ಮರಣ, 8 ಗಾಯ

ವಾಣಿಜ್ಯ ರಾಜಧಾನಿ ಮುಂಬೈನ ಗೊರೆಗಾಂವ್ ನ ಅಜಾದ್ ಮೈದಾನದ ಬಳಿ ನಿರ್ಮಾಣ ಹಂತದ ಕಟ್ಟಡ ಕುಸಿತಗೊಂಡು ಮೂವರು ಮೃತಪಟ್ಟ, ಹಲವು ಮಂದಿ ಗಾಯಗೊಂಡಿರುವ ಘಟನೆ ಇಂದು ನಡೆದಿದೆ.
ಕಟ್ಟಡ ಕುಸಿತ
ಕಟ್ಟಡ ಕುಸಿತ

ಮುಂಬೈ: ವಾಣಿಜ್ಯ ರಾಜಧಾನಿ ಮುಂಬೈನ ಗೊರೆಗಾಂವ್ ನ  ಅಜಾದ್ ಮೈದಾನದ ಬಳಿ   ನಿರ್ಮಾಣ ಹಂತದ ಕಟ್ಟಡ ಕುಸಿತಗೊಂಡು ಮೂವರು ಮೃತಪಟ್ಟ, ಹಲವು ಮಂದಿ ಗಾಯಗೊಂಡಿರುವ ಘಟನೆ  ಇಂದು ನಡೆದಿದೆ.

ಮೊತಿಲಾಲ್ ನಗರದಲ್ಲಿರುವ ಮೂರು ಅಂತಸ್ತಿನ ಮಹದ್ ಚವ್ಹಾ ಕಟ್ಟಡ ಇಂದು ಬೆಳಗ್ಗೆ ಹಠಾತ್ತನೆ ಕುಸಿತಗೊಂಡಿದೆ. ಇದರಿಂದಾಗಿ ಕಟ್ಟಡದ ಅವಶೇಷಗಳಡಿಯಲ್ಲಿ  ಸಿಲುಕಿದ ರಾಮು ಎಂಬುವನನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆತ ಬದುಕುಳಿಯಲಿಲ್ಲ ಎಂಬುದು ತಿಳಿದುಬಂದಿದೆ. ಇನ್ನೂ ಇಬ್ಬರು ಮೃತಪಟ್ಟಿರುವ ಬಗ್ಗೆ ಮಾಹಿತಿ ಬಂದಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಗಾಯಾಳುಗಳನ್ನು ಸಿದ್ದಾರ್ಥ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಗಾಯಾಳುಗಳ ಪರಿಸ್ಥಿತಿಯಲ್ಲಿ ಚೇತರಿಕೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.

ನಿರ್ಮಾಣ ಹಂತದ ಕಟ್ಟಡ ಕುಸಿತಕ್ಕೆ ಕಾರಣ ಏನು ಎಂಬುದು ಇನ್ನೂ  ದೃಢಪಟ್ಟಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com