ಈ ಬಗ್ಗೆ ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಮಾಹಿತಿ ನೀಡಿದ್ದು, ಅಯೋಧ್ಯೆಯಿಂದಲೇ ಯಾತ್ರೆ ಪ್ರಾರಂಭಿಸುವುದಾಗಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವತಃ ಆಸಕ್ತಿ ವಹಿಸಿ ಕೈಗೆತ್ತಿಕೊಂಡಿರುವ ಯೋಜನೆಯಾಗಿರುವ ಕಾಶಿ ವಿಶ್ವನಾಥ್ ಕಾರಿಡಾರ್ ಗಾಗಿ ಹಲವು ಪಾರಂಪರಿಕ, ಪುರಾತನ ಕಟ್ಟಡಗಳನ್ನು, ದೇವಾಲಯಗಳನ್ನು ಒಡೆಯಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಅಭಿಯಾನ ಕೈಗೊಳ್ಳುವುದಾಗಿ ಸಂಜಯ್ ಸಿಂಗ್ ತಿಳಿಸಿದ್ದಾರೆ.