ಕಳೆದ ಜನವರಿಯಲ್ಲಿ ಎಎಲ್ಎಚ್ ಧ್ರುವ ಹೆಲಿಕಾಫ್ಟರ್ ಸೈನಿಕರಿಗೆ ನಿತ್ಯ ಬಳಕೆಯ ವಸ್ತುಗಳನ್ನು ಪೂರೈಸಲು ಗ್ಲೇಸಿಯರ್ ಗೆ ತೆರಳಿತ್ತು. ಈ ಸಂದರ್ಭದಲ್ಲಿ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಪೈಲೆಟ್ ತಕ್ಷಣ ಹೆಲಿಕಾಪ್ಟರ್ ಅನ್ನು ಮಂಜಿನ ಮೇಲೆ ಇಳಿಸಿದ್ದರು. ಆ ನಂತರ ಹೆಲಿಕಾಪ್ಟರ್ ಹಿಮದಲ್ಲಿ ಸಿಲುಕಿತ್ತು. ಅದನ್ನು ಅಲ್ಲಿಂದ ಬಿಡಿಸಿ ಮತ್ತೆ ವಾಪಸ್ ತರಲು ಸಾಧ್ಯವಾಗಿರಲಿಲ್ಲ. ಮೈನಸ್ 25ರಿಂದ 30 ಡಿಗ್ರಿ ಸೆಲ್ಸಿಯಸ್ ತಾಪಮಾನವಿರುವ ಈ ಪ್ರದೇಶದಲ್ಲಿ ಹೆಲಿಕಾಪ್ಟರ್ ಅನ್ನು ರಿಪೇರಿ ಮಾಡುವುದು ಸಾಧ್ಯವಾಗಿರಲಿಲ್ಲ.