10 ಶಂಕಿತ ಉಗ್ರರ ಬಂಧನ, ರಾಕೆಟ್ ಲಾಂಚರ್, 12 ಪಿಸ್ತೂಲ್, 120 ಅಲಾರ್ಮ್ ಜಪ್ತಿ

ಉತ್ತರ ಪ್ರದೇಶ ಹಾಗೂ ದೆಹಲಿಯಲ್ಲಿ ಬುಧವಾರ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಅಧಿಕಾರಿಗಳು....
ಜಪ್ತಿ ಮಾಡಿದ ವಸ್ತುಗಳು
ಜಪ್ತಿ ಮಾಡಿದ ವಸ್ತುಗಳು
Updated on
ನವದೆಹಲಿ: ಉತ್ತರ ಪ್ರದೇಶ ಹಾಗೂ ದೆಹಲಿಯಲ್ಲಿ ಬುಧವಾರ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಅಧಿಕಾರಿಗಳು, 10 ಶಂಕಿತ ಉಗ್ರರನ್ನು ಬಂಧಿಸಿದ್ದು, ಬಂಧಿತರಿಂದ ರಾಕೆಟ್ ಲಾಂಚರ್, 12 ಪಿಸ್ತೂಲ್, 120 ಅಲಾರ್ಮ್ ಹಾಗೂ 25 ಕೆಜಿ ಸ್ಪೋಟಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ಐಎಸ್ಐಎಸ್ ಉಗ್ರ ಸಂಘಟನೆಯ ಪ್ರೇರಿತವಾದ ಹರ್ಕತ್ ಉಲ್ ಹರ್ಬ್ ಇ-ಇಸ್ಲಾಂ ಎಂಬ ಉಗ್ರ ಸಂಘಟನೆ ದೆಹಲಿ ಮತ್ತುಉತ್ತರ ಪ್ರದೇಶದ ಪ್ರಮುಖ ಸ್ಥಳಗಳಲ್ಲಿ ಹಾಗೂ ಗಣ್ಯರನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಎನ್ಐಎ ಅಧಿಕಾರಿಗಳು ತಿಳಿಸಿದ್ದಾರೆ.
ಇಂದು 17ಕ್ಕೂ ಹೆಚ್ಚು ದಾಳಿಗಳನ್ನು ನಡೆಸಿದ್ದ ಎನ್ಐಎ ಅಧಿಕಾರಿಗಳು ಒಟ್ಟು 16 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇವರಲ್ಲಿ ಹತ್ತು ಶಂಕಿತ ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮಹಾ ನಿರ್ದೇಶಕ(ಎನ್ಐಎ) ಅಲೋಕ್ ಮಿತ್ತಲ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ದೆಹಲಿಯಲ್ಲಿರುವ ರಕ್ಷಣಾ ಕಚೇರಿಗಳನ್ನು ಮತ್ತು ರಾಜಕೀಯ ಗಣ್ಯರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಸಿದ್ಧತೆ ನಡೆಸಿದ್ದರು ಎಂದು ಅವರು ತಿಳಿಸಿದ್ದಾರೆ.
ಬಂಧಿತರಿಂದ 25 ಕೆ.ಜಿ. ಸ್ಫೋಟಕ ವಸ್ತುಗಳು, ಬಂದೂಕುಗಳು, ದೇಶಿ ನಿರ್ಮಿತ ರಾಕೆಟ್ ಲಾಂಚರ್‌, 12 ಪಿಸ್ತೂಲ್, 120 ಅಲಾರ್ಮ್, 100 ಮೊಬೈಲ್‌ ಫೋನ್‌ಗಳು, 135 ಸಿಮ್‌ ಕಾರ್ಡ್‌ಗಳು, ಲ್ಯಾಪ್‌ಟಾಪ್‌ಗಳು, ಮೆಮೋರಿ ಕಾರ್ಡ್‌ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಮಿತ್ತಲ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com