ನಮಾಜ್ ವಿವಾದ: ನಾವು ಯಾವುದೇ ಧರ್ಮದ ವಿರುದ್ಧವಿಲ್ಲ- ಉತ್ತರಪ್ರದೇಶ ಪೊಲೀಸರ ಸ್ಪಷ್ಟನೆ

ನೋಯ್ಡಾದಲ್ಲಿ ಪಾರ್ಕ್ ಸೇರಿದಂತೆ ಯಾವುದೇ ಸಾರ್ವಜನಿಕ ಪ್ರದೇಶದಲ್ಲಿ ನಮಾಜ್ ಮಾಡದಂತೆ ಉತ್ತರಪ್ರದೇಶ ಪೊಲೀಸರು ಹೊರಡಿಸಿರುವ ಆದೇಶ ಭಾರೀ ವಿವಾದ ಸೃಷ್ಟಿಸಿರುವ ಬೆನ್ನಲ್ಲೇ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಪೊಲೀಸರು...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನೋಯ್ಡಾ: ನೋಯ್ಡಾದಲ್ಲಿ ಪಾರ್ಕ್ ಸೇರಿದಂತೆ ಯಾವುದೇ ಸಾರ್ವಜನಿಕ ಪ್ರದೇಶದಲ್ಲಿ ನಮಾಜ್ ಮಾಡದಂತೆ ಉತ್ತರಪ್ರದೇಶ ಪೊಲೀಸರು ಹೊರಡಿಸಿರುವ ಆದೇಶ ಭಾರೀ ವಿವಾದ ಸೃಷ್ಟಿಸಿರುವ ಬೆನ್ನಲ್ಲೇ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಪೊಲೀಸರು, ನಾವು ಯಾವುದೇ ಧರ್ಮದ ವಿರುದ್ಧವಿಲ್ಲ ಎಂದು ಬುಧವಾರ ಹೇಳಿದ್ದಾರೆ. 
ನೋಯ್ಡಾದ ಕೈಗಾರಿಕಾ ಪ್ರದೇಶವಾದ ಸೆಕ್ಟರ್ 58ರ ನಿರ್ದಿಷ್ಟ ಪ್ರದೇಶವೊಂದರಲ್ಲಿ ಶುಕ್ರವಾರ ನಮಾಜ್'ಗೆ ಅವಕಾಶ ನೀಡುವಂತೆ ಕೋರಿ ಈ ಹಿಂದೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ, ಈ ಮನವಿಯನ್ನು ಜಿಲ್ಲಾಧಿಕಾರಿಗಳು ತಿರಸ್ಕರಿಸಿದ್ದರು. ಇದರ ಹೊರತಾಗಿಯೂ ಸುತ್ತಮುತ್ತಲ ಕಂಪನಿಗಳಲ್ಲಿ ಕಾರ್ಯನಿರ್ವಹಿಸುವ ಮುಸ್ಲಿಮರು ಸಮೀಪದ ಪಾರ್ಕ್ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ಶುಕ್ರವಾರ ದಿನ ನಮಾಜ್ ಮಾಡುತ್ತಿದ್ದರು. 
ಈ ಪಾರ್ಕ್ ಸೇರಿದಂತೆ ಯಾವುದೇ ಸಾರ್ವಜನಿಕ ಪ್ರದೇಶಗಳಲ್ಲಿ ನಮಾಜ್ ಮಾಡಬಾರದು. ಒಂದು ವೇಳೆ ಸಾರ್ವಜನಿಕ ಪ್ರದೇಶದಲ್ಲಿ ಯಾವುದೇ ವ್ಯಕ್ತಿ ನಮಾಜ್ ಮಾಡಿದರೆ, ಅದಕ್ಕೆ ಕಂಪನಿಗಳೇ ಹೊಣೆ ಎಂದು ಪೊಲೀಸರು ಆದೇಶ ಹೊರಡಿಸಿದ್ದರು. ಈ ಆದೇಶ ಇದೀಗ ಭಾರೀ ವಿವಾದವನ್ನು ಸೃಷ್ಟಿ ಮಾಡಿದೆ. 
ಈ ಹಿನ್ನಲೆಯಲ್ಲಿ ಸ್ಪಷ್ಟನೆ ನೀಡಿರುವ ನೊಯ್ಡಾ ಪೊಲೀಸರು., ನಾವು ಯಾವುದೇ ಧರ್ಮದ ವಿರುದ್ಧವಿಲ್ಲ. ಇದು ಕೇವಲ ನಮಾಜ್'ಗಷ್ಟೇ ಅಲ್ಲ. ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೂ ಅನ್ವಯವಾಗುತ್ತದೆ. ಈ ಆದೇಶ ಎಲ್ಲಾ ಧರ್ಮಗಳಿಗೂ ಅನ್ವಯವಾಗುತ್ತದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com