ದೇಶ

ಮಹಾರಾಷ್ಟ್ರ: ಲೈಂಗಿಕ ಕಿರುಕುಳದಿಂದ ಬೇಸತ್ತು ಯುವಕನ ಜನನಾಂಗ ಕತ್ತರಿಸಿದ ಮಹಿಳೆ

ಲೈಂಗಿಕ ಕಿರುಕುಳದಿಂದ ರೋಸಿಹೋಗಿ ಇಬ್ಬರ ಸಹಾಯದಿಂದ 27 ವರ್ಷದ ಯುವಕನ ಜನನಾಂಗ ಕತ್ತರಿಸಿದ ಮಹಿಳೆಯನ್ನು ಥಾಣೆಯ ಪೊಲೀಸರು ಇಂದು ಬಂಧಿಸಿದ್ದಾರೆ.

ಮಹಾರಾಷ್ಟ್ರ: ಲೈಂಗಿಕ ಕಿರುಕುಳದಿಂದ ಬೇಸತ್ತು ಯುವಕನ ಜನನಾಂಗ ಕತ್ತರಿಸಿದ ಮಹಿಳೆ
ಮಹಿಳೆಯ ಚಿತ್ರ
Published On :
ಮುಂಬೈ: ಲೈಂಗಿಕ ಕಿರುಕುಳದಿಂದ ರೋಸಿಹೋಗಿ ಇಬ್ಬರ ಸಹಾಯದಿಂದ 27 ವರ್ಷದ ಯುವಕನ  ಜನನಾಂಗ ಕತ್ತರಿಸಿದ ಮಹಿಳೆಯನ್ನು ಥಾಣೆಯ ಪೊಲೀಸರು ಇಂದು ಬಂಧಿಸಿದ್ದಾರೆ.
ಮಾನ್ಪಾಡಾ ಪ್ರದೇಶದ ನಂದಿವಾಲಿಯಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದ್ದು, ಜನನಾಂಗ ಕತ್ತರಿಸಿಕೊಂಡ ಯುವಕ ಹಾಗೂ ಆ ಮಹಿಳೆ ಇಬ್ಬರೂ ಒಂದೇ ಪ್ರದೇಶದಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸ್  ಅಧಿಕಾರಿಗಳು ಹೇಳಿದ್ದಾರೆ. ಆದರೆ, ಅವರಿಬ್ಬರ ಗುರುತನ್ನು ಬಿಟ್ಟುಕೊಟ್ಟಿಲ್ಲ.
ಕಳೆದ ಕೆಲವು ವಾರಗಳಿಂದ  ಅಶ್ಲೀಲ ಶಬ್ದಗಳಿಂದ ನಿಂದಿಸುತ್ತಿದ್ದ ಅದ್ದಕ್ಕಾಗಿ ಈ ಕೃತ್ಯವೆಸಗಿದ್ದಾಗಿ  ಮಹಿಳೆ ಹೇಳಿಕೆ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.