ಹಿಮಾಚಲದಲ್ಲಿ 26 ಸಾವಿರ ಕೋಟಿ ರು. ಮೌಲ್ಯದ ಯೋಜನೆಗಳು ಪ್ರಗತಿಯಲ್ಲಿವೆ: ಪ್ರಧಾನಿ ಮೋದಿ

ಹಿಮಾಚಲ ಪ್ರದೇಶದ ವಿವಿಧ ಪ್ರದೇಶಗಳಲ್ಲಿ 26 ಸಾವಿರ ಕೋಟಿ ರುಪಾಯಿ ಮೌಲ್ಯದ ಯೋಜನೆಗಳು ಪ್ರಗತಿಯಲ್ಲಿವೆ...
ನರೇಂದ್ರ ಮೋದಿ
ನರೇಂದ್ರ ಮೋದಿ
Updated on
ಧರ್ಮಶಾಲಾ: ಹಿಮಾಚಲ ಪ್ರದೇಶದ ವಿವಿಧ ಪ್ರದೇಶಗಳಲ್ಲಿ 26 ಸಾವಿರ ಕೋಟಿ ರುಪಾಯಿ ಮೌಲ್ಯದ ಯೋಜನೆಗಳು ಪ್ರಗತಿಯಲ್ಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದ್ದಾರೆ.
ಹಿಮಾಚಲ ಪ್ರದೇಶದ ಜೈರಾಮ್‌ ಠಾಕೂರ್‌ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿರುವ ಪ್ರಯುಕ್ತ ಏರ್ಪಡಿಸಲಾಗಿದ್ದ 'ಜನ್‌ ಆಭಾರ್‌' ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, 'ಧರ್ಮಶಾಲಾ ನನಗೆ ಮನೆಯ ಹಾಗೆ. ಇಲ್ಲಿ ಅನೇಕ ವರ್ಷಗಳ ಕಾಲ ನಾನು ಪಕ್ಷಕ್ಕಾಗಿ ಕೆಲಸ ಮಾಡಿಕೊಂಡಿದ್ದೆ. ಆಗ ರಾಜ್ಯಾದಂತ್ಯ ಓಡಾಡಿಕೊಂಡಿದ್ದ ನನಗೆ ಅನೇಕ ಅನುಭವಗಳಾಗಿವೆ. ಅನೇಕ ಹಿರಿಯ ನಾಯಕರೊಂದಿಗೆ ನಾನಿಲ್ಲಿ ಕೆಲಸ ಮಾಡಿದ್ದೇನೆ' ಎಂದರು.
ಹಿಮಾಚಲ ಪ್ರದೇಶವು ದೇಶದ ಗಡಿ ರಕ್ಷಣೆಗೆ ತಮ್ಮನ್ನು ಸಮರ್ಪಿಸಿಕೊಳ್ಳುವ ವೀರ ಯೋಧರ ಪುಣ್ಯಭೂಮಿಯಾಗಿದೆ' ಎಂದು ಪ್ರಧಾನಿ ಮೋದಿ ವರ್ಣಿಸಿದರು. 
ಇದೇ ವೇಳೆ ಬಿಜೆಪಿ ಸರ್ಕಾರದ ಒಂದು ವರ್ಷದ ಸಾಧನೆಗಳನ್ನು ಒಳಗೊಂಡ ಕಿರು ಪುಸ್ತಕವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com