ಪೋಕ್ಸೊ ಕಾಯ್ದೆ ತಿದ್ದುಪಡಿಗೆ ಕೇಂದ್ರ ಸಂಪುಟ ಅಸ್ತು, ಗಲ್ಲು ಶಿಕ್ಷೆಗೆ ಅವಕಾಶ

2012ರ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಸ್ಕೋ) ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಗುರುವಾರ ಒಪ್ಪಿಗೆ ಸೂಚಿಸಿದ್ದು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: 2012ರ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಗುರುವಾರ ಒಪ್ಪಿಗೆ ಸೂಚಿಸಿದ್ದು, ಮಕ್ಕಳ ಮೇಲೆ ಅತ್ಯಾಚಾರ ಎಸಗುವ ಕಾಮುಕರಿಗೆ ಗಲ್ಲು ಶಿಕ್ಷೆ ವಿಧಿಸಲು ಅವಕಾಶ ನೀಡಲಾಗಿದ.
ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು, ಪೋಕ್ಸೊ ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಗಲ್ಲು ಶಿಕ್ಷೆ ಸೇರಿದಂತೆ ಪೋಕ್ಸೊ ಕಾಯ್ದೆಯನ್ನು ಮತ್ತಷ್ಟು ಬಲಪಡಿಸಲು ಸರ್ಕಾರ ಅತ್ಯಂತ ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ ಎಂದರು.
ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ನಡೆದ ಎಂಟು ವರ್ಷದ ಬಾಲಕಿಯ ಅತ್ಯಾಚಾರ ಹಾಗೂ ಕೊಲೆಯ ನಂತರ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮೇನಕಾ ಗಾಂಧಿ ಪೋಕ್ಸೊ ಕಾಯ್ದೆಗೆ ತಿದ್ದುಪಡಿ ತರುವುದಾಗಿ ಹೇಳಿದ್ದರು. ಅಲ್ಲದೆ ಇಂತಹಪ್ರಕರಣದಲ್ಲಿ ಭಾಗಿಯಾದ ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವುದಕ್ಕೆ ಅವಕಾಶ ಕಲ್ಪಿಸುವ ಅಂಶ ಈ ತಿದ್ದುಪಡಿಯಲ್ಲಿ ಸೇರಿಸಲಾಗುವುದು ಎಂದಿದ್ದರು.
ಪ್ರಸ್ತೂತ ಪೋಕ್ಸೊ ಕಾಯ್ದೆಯ ಪ್ರಕಾರ ಅತ್ಯಾಚಾರಿಗಳಿಗೆ ಗರಿಷ್ಠ ಶಿಕ್ಷೆ ಎಂದರೆ ಜೀವಾವಧಿ ಶಿಕ್ಷೆ ಕನಿಷ್ಠ ಎಂದರೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಆದರೆ ಈಗ ಮರಣ ದಂಡನೆ ಶಿಕ್ಷೆ ವಿಧಿಸುವ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com