ಆಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಕ್ಯಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಹೆಸರು ಪ್ರಸ್ತಾಪಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ವಕ್ತಾರ ಆರ್ ಪಿಎನ್ ಸಿಂಗ್ ಅವರು, ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ಚುನಾವಣೆಯಲ್ಲಿ ಬೇರೆ ವಿಷಯ ಇಲ್ಲ. ಹೀಗಾಗಿ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಒಂದು ನಿರ್ದಿಷ್ಟ ಕುಟುಂಬದ ಹೆಸರು ಹೇಳುವಂತೆ ಮೈಕೆಲ್ ಮೇಲೆ ಒತ್ತಡ ಹಾಕುತ್ತಿರುವುದನ್ನು ಕೆಲವು ಸುದ್ದಿ ವಾಹಿನಿಗಳು ತೋರಿಸಿವೆ. ಅದನ್ನು ನಾವು ಗಮನಿಸಿದ್ದೇವೆ ಎಂದರು.