ಕತುವಾದಲ್ಲಿ ಸೇನೆ ಭರ್ಜರಿ ಕಾರ್ಯಾಚರಣೆ: ಭಾರೀ ಪ್ರಮಾಣದ ಸ್ಫೋಟಕ ವಸ್ತು, ಶಸ್ತ್ರಾಸ್ತ್ರ ವಶ

ಜಮ್ಮು ಮತ್ತು ಕಾಶ್ಮೀರದ ಕತುವಾ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನಾ ಪಡೆ, ಭಾರೀ ಪ್ರಮಾಣದ ಸ್ಫೋಟಕ ವಸ್ತು ಹಾಗೂ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದೆ. ಈ ಮೂಲಕ ದಾಳಿಗೆ ಉಗ್ರರು ರೂಪಿಸಿದ್ದ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕತುವಾ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನಾ ಪಡೆ, ಭಾರೀ ಪ್ರಮಾಣದ ಸ್ಫೋಟಕ ವಸ್ತು ಹಾಗೂ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದೆ. ಈ ಮೂಲಕ ದಾಳಿಗೆ ಉಗ್ರರು ರೂಪಿಸಿದ್ದ ಸಂಚು ವಿಫಲಗೊಳ್ಳುವಂತೆ ಮಾಡಿದೆ. 
ಸೇನೆ ನಡೆಸಿರುವ ಕಾರ್ಯಾಚರಣೆ ಕುರಿತಂತೆ ರಕ್ಷಣಾ ವಕ್ತಾರರು ಮಾಹಿತಿ ನೀಡಿದ್ದು, ಕತುವಾ ಜಿಲ್ಲೆ ಬಿಲ್ಲಾವಾರ್ ಬ್ಲಾಕ್ ನಲ್ಲಿ ಸೇನೆ ಹಾಗೂ ಸ್ಥಳೀಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಕಾರ್ಯಾಚರಣೆ ವೇಳೆ ಭದ್ರತಾಪಡೆಗಳು 2 ಎಕೆ ರೈಫಲ್ಸ್ ಗಳು, ಗ್ರೆನೇಡ್ ಗಳು, 4 ನಿಯತಕಾಲಿಕೆಗಳು, 256 ಹಾಗೂ 59 ಸುತ್ತಿನ ಸ್ನೈಪರ್ ಮದ್ದುಗುಂಡುಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ಹೇಳಿದ್ದಾರೆ. 
ಸೇನಾ ಗುಪ್ತಚರಗಳು ನೀಡಿದ ಮಾಹಿತಿ ಹಿನ್ನಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು. ಇದರಂತೆ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲಾಗಿದ್ದು, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು, ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಸೇನಾ ಕಾರ್ಯಾಚರಣೆಯಿಂದ ಸಂಭವಿಸಬೇಕಿದ್ದ ದೊಡ್ಡ ದಾಳಿಯೊಂದು ವಿಫಲಗೊಳ್ಳುವಂತಾಗಿದೆ ಎಂದು ತಿಳಿಸಿದ್ದಾರೆ. 
ದೊಡ್ಡ ಪ್ರಮಾಣದ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರರು, ಇದಕ್ಕಾಗಿ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ಪಾಲಿಥಿನ್ ಚೀಲದಲ್ಲಿಟ್ಟು ಬಚ್ಚಿಟ್ಟಿದ್ದಾರೆಂದು ರಕ್ಷಣಾ ಮೂಲಗಳು ಮಾಹಿತಿ ನೀಡಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com