ಮೋದಿ 'ನಟಸಾಮ್ರಾಟ ' ಬುಲೆಟ್ ಟ್ರೈನ್ ಯೋಜನೆ ವಿರುದ್ಧ ಮೆವಾನಿ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರಸರ್ಕಾರ ಹಾಗೂ ಮಹಾರಾಷ್ಟ್ರ ಸರ್ಕಾರದ ಆಡಳಿತ ನೀತಿಗಳ ವಿರುದ್ಧ ಗುಜರಾತ್ ಶಾಸಕ ಜಿಗ್ನೇಶ್ ಮೆವಾನಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಜಿಗ್ನೇಶ್ ಮೇವಾನಿ
ಜಿಗ್ನೇಶ್ ಮೇವಾನಿ
Updated on

ಮಹಾರಾಷ್ಟ್ರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರಸರ್ಕಾರ ಹಾಗೂ ಮಹಾರಾಷ್ಟ್ರ ಸರ್ಕಾರದ ಆಡಳಿತ ನೀತಿಗಳ ವಿರುದ್ಧ ಗುಜರಾತ್ ಶಾಸಕ  ಜಿಗ್ನೇಶ್ ಮೆವಾನಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಪಾಲ್ಗುರ್ ಜಿಲ್ಲೆಯಲ್ಲಿನ ವಾಸಾಯಿ ಬಳಿ ಪರಿಸರ ಸಂರಕ್ಷಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮುಂಬೈ ಮತ್ತು ಅಹಮದಾಬಾದ್ ನಡುವಿನ ಪ್ರಸ್ತಾವಿತ  ಬುಲೆಟ್ ಟ್ರೈನ್ ಯೋಜನೆ ವಿಚಾರವಾಗಿ ಮೋದಿ  ವಿರುದ್ಧ ಗುಡುಗಿದರು. ಅಭಿವೃದ್ದಿ ವಿಚಾರದಲ್ಲಿ ದೊಡ್ಡದಾಗಿ ಸಮರ್ಥನೆ ಮಾಡಿಕೊಳ್ಳುವ ಪ್ರಧಾನಿ ಮೋದಿ ನಟಸಾಮ್ರಾಟ, ಬ್ಲಪರ್ ಎಂದು ಟೀಕಿಸಿದರು.

ದುಬಾರಿ ವೆಚ್ಚದ ಬುಲೆಟ್ ರೈಲಿನಿಂದ ಏನು ಉಪಯೋಗ , ಇದರಿಂದ ಸಾಮಾನ್ಯರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಹೇಳಿದ ಜಿವಾನಿ, ಮೊದಲು ಉಪನಗರ  ರೈಲು ಸೇವೆಯನ್ನು ಅಭಿವೃದ್ಧಿಪಡಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಪಢ್ನವೀಸ್ ಅವರನ್ನು ಒತ್ತಾಯಿಸಿದರು.

ಲೋಕಸಭಾ ಚುನಾವಣೆಯಲ್ಲಿ ಜನರ ಮನಸ್ಸನ್ನು  ಗೆಲ್ಲುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ  ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವನ್ನು ಪ್ರಸ್ತಾಪಿಸಲಾಗುತ್ತಿದೆ. ಹೆದ್ದಾರಿ ಮತ್ತು ಕಾರಿಡಾರ್ ನಂತಹ ಯೋಜನೆಗಳಿಗಾಗಿ  ರೈತರಿಗೆ ಅತಿಮುಖ್ಯವಾದ ಜಮೀನನನ್ನು ಸ್ವಾಧೀನಪಡಿಸಲಾಗುತ್ತಿದೆ ಎಂದರು.
ಇದೇ ವೇಳೆ  ಗುಜರಾತಿನಲ್ಲಿ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡಿ ಸರ್ದರ್ ವಲ್ಲಭಬಾಯಿ ಪಟೇಲ್ ಪ್ರತಿಮೆ ಸ್ಥಾಪಿಸುವ ಔಚಿತ್ಯವೇನಿತ್ತು ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com