ಉಗ್ರನ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಬಳಿಕ ಮಾತನಾಡಿರುವ ಮೆಹಬೂಬಾ ಮುಫ್ತಿ, ಪೊಲೀಸರು ಭಯೋತ್ಪಾದಕನ ಸಹೋದರಿಯನ್ನು ಥಳಿಸಿರುವುದು ದುರದೃಷ್ಟಕರ ಎಂದು ಹೇಳಿದ್ದಾರೆ. ಇದೇ ವೇಳೆ ರಾಜ್ಯಪಾಲರು ಹಾಗೂ ಜಮ್ಮು-ಕಾಶ್ಮೀರದ ಪೊಲೀಸರಿಗೆ ಮೆಹಬೂಬಾ ಮುಫ್ತಿ ಎಚ್ಚರಿಕೆ ನೀಡಿದ್ದು, ಈ ರೀತಿಯ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕೆಂದು ಹೇಳಿದ್ದಾರೆ.