2019ರ ಲೋಕಸಭೆ ಚುನಾವಣೆಯ ನಂತರವೇ ಕಾಂಗ್ರೆಸ್ ಮಿತ್ರ ಪಕ್ಷಗಳೊಂದಿಗೆ ಚರ್ಚಿಸಿ ಒಮ್ಮತದಿಂದ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ರಾಹುಲ್ ಗಾಂಧಿ ನಮ್ಮ ನಾಯಕ. ಅದರ ಅರ್ಥ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದರೆ ಅವರೇ ಪ್ರಧಾನಿ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಸಮ್ಮಿಶ್ರ ಸರ್ಕಾರ ರಚಿಸುವ ಪರಿಸ್ಥಿತಿ ನಿರ್ಮಾಣವಾದರೆ ಮಿತ್ರ ಪಕ್ಷಳೊಂದಿಗೆ ಚರ್ಚಿಸಿ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕಾಗುತ್ತದೆ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತರೂರ್ ತಿಳಿಸಿದ್ದಾರೆ.