ಮಧ್ಯ ಪ್ರದೇಶ ಮತ್ತು ರಾಜಸ್ತಾನದಲ್ಲಿ ಬೆಂಬಲ ವಾಪಸ್: ಕಾಂಗ್ರೆಸ್‌ಗೆ ಬಿಎಸ್‏ಪಿ ಬೆದರಿಕೆ

2018ರ ಏಪ್ರಿಲ್ 2ರ ಭಾರತ್ ಬಂದ್ ವೇಳೆ ದಾಖಲಾಗಿದ್ದ ಪ್ರಕರಣಗಳನ್ನು ವಜಾ ಮಾಡಬೇಕು. ಇಲ್ಲದಿದ್ದರೆ ರಾಜಸ್ತಾನ ಹಾಗೂ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ...
ಮಾಯಾವತಿ-ರಾಹುಲ್ ಗಾಂಧಿ
ಮಾಯಾವತಿ-ರಾಹುಲ್ ಗಾಂಧಿ
Updated on: 
ನವದೆಹಲಿ: ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ)ದ ಮುಖ್ಯಸ್ಥೆ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಹಾಗೂ ಕಾಂಗ್ರೆಸ್ ನಡುವಿನ ಸಂಬಂಧ ಹಳಸಿದೆ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ. ಹೌದು ಮಧ್ಯಪ್ರದೇಶ ಹಾಗೂ ರಾಜಸ್ತಾನದಲ್ಲಿ ಕಾಂಗ್ರೆಸ್ ಗೆ ನೀಡಿರುವ ಬೆಂಬಲವನ್ನು ಹಿಂಪಡೆಯುವುದಾಗಿ ಬಿಎಸ್ಪಿ ಬೆದರಿಕೆಯೊಡ್ಡಿದೆ.
2018ರ ಏಪ್ರಿಲ್ 2ರ ಭಾರತ್ ಬಂದ್ ವೇಳೆ ದಾಖಲಾಗಿದ್ದ ಪ್ರಕರಣಗಳನ್ನು ವಜಾ ಮಾಡಬೇಕು. ಇಲ್ಲದಿದ್ದರೆ ರಾಜಸ್ತಾನ ಹಾಗೂ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನೀಡಿರುವ ಬೆಂಬಲವನ್ನು ವಾಪಸ್ ಪಡೆಯುವುದಾಗಿ ಮಾಯಾವತಿಯ ಪಕ್ಷ ಬೆದರಿಕೆಯೊಡ್ಡಿದೆ. 
ಎಸ್ಸಿ ಎಸ್ಟಿ(ದೌರ್ಜನ್ಯ ತಡೆ) ಕಾಯ್ದೆ-1989 ದುರ್ಬಲಗೊಳಿಸಿರುವ ಸಂಬಂಧ ಹಲವು ದಲಿತ ಸಂಘಟನೆಗಳು ಏಪ್ರಿಲ್ 2ರಂದು ಭಾರತ್ ಬಂದ್ ಗೆ ಕರೆ ನೀಡಿದ್ದವು, ಈ ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಈ ಸಂಬಂಧ ದಲಿತ ಸಂಘಟನೆಗಳ ವಿರುದ್ಧ ಪ್ರಕರಣ ದಾಖಲಾಗಿದ್ದವು. ಇನ್ನು ಪ್ರತಿಭಟನೆ ವೇಳೆ 10 ಮಂದಿ ಮೃತಪಟ್ಟಿದ್ದರು.
ಪರಿಶಿಷ್ಟ ಜಾತಿ, ಪಂಗಡಗಳ ಜನರ ಮೇಲಿನ ದೌರ್ಜನ್ಯದ ಬಗ್ಗೆ ದೂರು ನೀಡಿದ ಕೂಡಲೇ ಆರೋಪಿಗಳ ಬಂಧನ ಮತ್ತು ಪ್ರಕರಣ ದಾಖಲು ಮಾಡುವ ಅಗತ್ಯ ಇಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com