ಪ್ರಮುಖವಾಗಿ ಕರ್ನಾಟಕ, ಉತ್ತರ ಪ್ರದೇಶ, ಪಂಜಾಬ್, ಮಹಾರಾಷ್ಟ್ರ, ಛತ್ತೀಸ್ ಗಡ, ಮಧ್ಯಪ್ರದೇಶ ಸರ್ಕಾರಗಳು ಕೃಷಿ ಸಾಲಮನ್ನಾ ಮಾಡುವುದಾಗಿ ಹೇಳಿವೆ. ಕರ್ನಾಟಕದ ಜೆಡಿಎಸ್–ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರೂ.46,756.61 ಕೋಟಿ ಕೃಷಿ ಸಾಲಮನ್ನಾ ಮಾಡಿದೆ. ಸಾಲಮನ್ನಾ ಘೋಷಣೆ ಮಾಡಿದ ಎಲ್ಲ ರಾಜ್ಯಗಳ ಪೈಕಿ ಇದು ಅತ್ಯಂತ ದೊಡ್ಡ ಮೊತ್ತವಾಗಿದೆ ಎಂದು ತಿಳಿದುಬಂದಿದೆ.