ಹೊಸ ವರ್ಷ ಸಂಭ್ರಮಕ್ಕಾಗಿ ಬರುತ್ತಿದ್ದಾಗ ಭೀಕರ ಅಪಘಾತ, ಒಂದೇ ಕುಟುಂಬದ 10 ಮಂದಿ ದಾರುಣ ಸಾವು!

ಹೊಸ ವರ್ಷವನ್ನು ಬರಮಾಡಿಕೊಳ್ಳಲು ತಮ್ಮ ಹುಟ್ಟೂರಿಗೆ ತೆರಳುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 10 ಮಂದಿ ದಾರುಣ ಸಾವನ್ನಪ್ಪಿರುವ ಘಟನೆ ಗುಜರಾತ್ ನಲ್ಲಿ ಸಂಭವಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಕಚ್: ಹೊಸ ವರ್ಷವನ್ನು ಬರಮಾಡಿಕೊಳ್ಳಲು ತಮ್ಮ ಹುಟ್ಟೂರಿಗೆ ತೆರಳುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 10 ಮಂದಿ ದಾರುಣ ಸಾವನ್ನಪ್ಪಿರುವ ಘಟನೆ ಗುಜರಾತ್ ನಲ್ಲಿ ಸಂಭವಿಸಿದೆ.
ಗುಜರಾತ್ ನ ಕಚ್ ಜಿಲ್ಲೆಯ ಭಚೌ ಹೆದ್ದಾರಿಯಲ್ಲಿ ಎಸ್ಯುವಿ ಸ್ಪೋರ್ಟ್ಸ್ ಕಾರು ಎರಡು ಲಾರಿಗಳ ನಡುವೆ ಡಿಕ್ಕಿಯಾಗಿ ನಜ್ಜುಗುಜ್ಜಾಗಿದ್ದು ಒಂದೇ ಕುಟುಂಬದ 10 ಮಂದಿ ಮೃತಪಟ್ಟಿದ್ದಾರೆ. 
ಟ್ರಕ್ ವೊಂದು ಡಿವೈಡರ್ ಗೆ ಡಿಕ್ಕಿಯಾಗಿ ಪಕ್ಕದ ರಸ್ತೆಗೆ ಹಾರಿ ಕಾರಿಗೆ ಡಿಕ್ಕಿಯಾಗಿದೆ. ಕಾರಿನ ಹಿಂದೆ ಸಹ ಒಂದು ಲಾರಿ ಬರುತ್ತಿದ್ದು ಅದು ಸಹ ಕಾರಿಗೆ ಡಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com