ನಾನೂ ಕೂಡ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್: ದೇವೇಗೌಡ

ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿರುವ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದು, ತಾವೂ ಸಹ ಆಕ್ಸಿಡೆಂಟಲ್ ಪ್ರೈಮಿನಿಸ್ಟರ್ ಎಂದು ಹೇಳಿದ್ದಾರೆ.
ದೇವೇಗೌಡ
ದೇವೇಗೌಡ
ನವದೆಹಲಿ: ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿರುವ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದು, ತಾವೂ ಸಹ ಆಕ್ಸಿಡೆಂಟಲ್ ಪ್ರೈಮಿನಿಸ್ಟರ್ ಎಂದು ಹೇಳಿದ್ದಾರೆ. 
ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾನ ಅವಧಿಯನ್ನು ಸಿನಿಮಾ ರೂಪದಲ್ಲಿ ಹೊರತರಲಾಗಿದ್ದು, ಕಾಂಗ್ರೆಸ್ ಪಕ್ಷ ತನ್ನ ವಿರುದ್ಧ ಬಿಜೆಪಿ ಮಾಡುತ್ತಿರುವ ಪ್ರಚಾರ ಎಂದು ಸಿನಿಮಾ ಬಗ್ಗೆ ಆರೋಪ ಮಾಡುತ್ತಿದೆ. ಈ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ,  ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಚಿತ್ರಕ್ಕೆ ಏಕೆ ಅನುಮತಿ ನೀಡಲಾಯಿತೋ ಗೊತ್ತಿಲ್ಲ ಬಹುಶಃ ಇದೆಲ್ಲಾ ಪ್ರಾರಂಭವಾಗಿದ್ದು 3-4 ತಿಂಗಳ ಹಿಂದೆ. ಸೋ ಕಾಲ್ಡ್ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಚಿತ್ರದ ಬಗ್ಗೆ ನಾನು ಆಳವಾಗಿ ತಿಳಿದುಕೊಂಡಿಲ್ಲ.  ನಾನು ಸಹ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಎಂದು ದೇವೇಗೌಡ ಲಘುವಾಗಿ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com