ನವದೆಹಲಿ: ಕೇಂದ್ರ ಸರ್ಕಾರ ಪರಿಚಯಿಸಲು ಉದ್ದೇಶಿಸ್ರುವ ಚುನಾವಣಾ ಬಾಂಡ್ ಗಳ ಸಾಚಾತನ ಕುರಿತು ವಿವರ ನೀಡುವಂತೆ ಭಾರತ ಸರ್ವೋಚ್ಚ ನ್ಯಾಯಾಲಯ ಕೇಂದ್ರ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿದೆ.
ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ) ನಾಯಕ ಸೀತಾರಾಂ ಯೆಚೂರಿ ಈ ಬಾಂಡ್ ಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ನೋಟೀಸ್ ಜಾರಿ ಮಾಡಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಎಎಂ ಖನ್ವಿಲ್ಕರ್ ಹಾಗೂ ಡಿವೈ ಚಂದ್ರಚೂಡ ಅವರನ್ನೊಳಗೊಂಡ ನ್ಯಾಯಪೀಠ ನೋಟೀಸ್ ಜಾರಿ ಮಾಡಿದ್ದು ಕೇಂದ್ರ ಸರ್ಕಾರದಿಂದ ಸೂಕ್ತ ವಿವರಣೆ ಕೇಳಿದೆ.