
ನವದೆಹಲಿ: 2018-19ರ ಕೇಂದ್ರ ಬಜೆಟ್ ನಲ್ಲಿ ಪ್ರಸ್ತಾಪಿಸಿರುವ ತಮಿಳುನಾಡು ರಕ್ಷಣಾ ಕಾರಿಡಾರ್ ಚೆನ್ನೈ ಮತ್ತು ಬೆಂಗಳೂರನ್ನು ಸಂಪರ್ಕಿಸಲಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ತಮಿಳುನಾಡಿನಲ್ಲಿ ಮೊದಲಿಗೆ ಆರಂಭಗೊಳ್ಳುವ ಕಾರಿಡಾರ್ , ಚೆನ್ನೈ ಮತ್ತು ಬೆಂಗಳೂರನ್ನು ಸಂಪರ್ಕಿಸಲಿದ್ದು, ಎರಡನೇ ಕಾರಿಡಾರನ್ನು ಶೀಘ್ರದಲ್ಲಿಯೇ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.
ಹಣಕಾಸು ಸಚಿವ ಅರುಣ್ ಜೇಟ್ಲಿ ನಿನ್ನೆ ಮಂಡಿಸಿದ್ದ ಬಜೆಟ್ ನಲ್ಲಿ ಎರಡು ರಕ್ಷಣಾ ಕಾರಿಡಾರ್ ಸ್ಥಾಪನೆ ಮಾಡುವುದಾಗಿ ಹೇಳಿದ್ದರು. ಖಾಸಗಿ ಹಾಗೂ ಸರ್ಕಾರಿ ಸಹಭಾಗಿತ್ವದಲ್ಲಿ ರಕ್ಷಣಾ ಉತ್ಪನ್ನ ಉತ್ಪಾದನೆಯನ್ನು ಸರ್ಕಾರ ಪ್ರೋತ್ಸಾಹಿಸುತ್ತಿದ್ದು, ದೇಶದಲ್ಲಿ ರಕ್ಷಣಾ ಉತ್ಪನ್ನ ಉತ್ಪಾದಿಸುವ ಉದ್ಯಮಗಳ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದರು.
ಈ ಪ್ರಸ್ತಾವಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅರುಣ್ ಜೇಟ್ಲಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.ಕಳೆದ ಬಾರಿಗೆ ಹೋಲಿಸಿದ್ದರೆ ಈ ಬಾರಿ ರಕ್ಷಣಾ ಕ್ಷೇತ್ರಕ್ಕೆ ಮೀಸಲಿಟ್ಟಿರುವ ಹಣದಲ್ಲಿ ಶೇ.7.9 ರಷ್ಟು ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.
Advertisement