
ಉತ್ತರ ಪ್ರದೇಶ: ಗಣರಾಜ್ಯೋತ್ಸವ ದಿನದಂದು ಉತ್ತರ ಪ್ರದೇಶದ ಕಸ್ಗಂಜ್ ನಲ್ಲಿ ಸಂಭವಿಸಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತೊಬ್ಬ ಶಂಕಿತನನ್ನು ಪೊಲೀಸರು ಇಂದು ಬಂಧಿಸಿದ್ದಾರೆ.
ಅಭಿಷೇಕ್ ಚಂದನ್ ಗುಪ್ತಾ ಹತ್ಯೆಗೆ ಸಂಬಂಧಿಸಿದಂತೆ ರಾಹತ್ ಖುರೇಷಿ ಎಂಬಾತನನ್ನು ಬಂಧಿಸಲಾಗಿದೆ ಎಂದು ಕಸ್ಸಂಜ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿಯೂಷ್ ಶ್ರೀವಾಸ್ತವ್ ತಿಳಿಸಿದ್ದಾರೆ. ಘಟನೆ ಸಂಬಂಧ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ತಿರಾಂಗ ಯಾತ್ರೆ ಸಾಗುತ್ತಿದ್ದ ವೇಳೆ ಮುಸ್ಲಿಂ ಪ್ರಾಬಲ್ಯವಿರುವ ಪ್ರದೇಶದಲ್ಲಿ ಗಲಭೆ ಸಂಭವಿಸಿ 23 ವರ್ಷದ ಚಂದನ್ ಗುಪ್ತಾ ಹತ್ಯೆಯಾಗಿತ್ತು. ಮೂರು ಅಂಗಡಿ, ಎರಡು ಬಸ್ಸು, ಒಂದು ಕಾರಿನ ಮೇಲೆ ಕಲ್ಲು ತೂರಾಟ ನಡೆಸಿ ಜಖಂಗೊಳಿಸಲಾಗಿತ್ತು.
ಈ ಪ್ರಕರಣ ಸಂಬಂಧ ಪೊಲೀಸರು 20 ಮಂದಿಯನ್ನು ಬಂಧಿಸಿದ್ದಾರೆ. ಈ ಪೈಕಿ 17 ಮಂದಿ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Advertisement