ಇಂದು ಬೆಳಿಗ್ಗೆ ಪುಲ್ವಾದ ತ್ರಾಲ್'ನ ಬಟಗುಂಡ್ ಪ್ರದೇಶದಲ್ಲಿ ಉಗ್ರರು ಸಿಆರ್'ಪಿಎಫ್ ಯೋಧರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದು, ದಾಳಿ ಬಳಿಕ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ದಾಳಿಯಲ್ಲಿ ಇಬ್ಬರು ಯೋಧರೂ ಹಾಗೂ ಇಬ್ಬರು ನಾಗರೀಕರು ಗಾಯಗೊಂಡಿದ್ದು, ಗಾಯಗೊಂಡ ಯೋಧರನ್ನು ಹಾಗೂ ನಾಗರೀಕರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.