ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣ; ಮೂವರು ಆರೋಪಿಗಳ ಬಂಧನ
ಜಮ್ಮು ಮತ್ತು ಕಾಶ್ಮೀರದ ಇಬ್ಬರು ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಹರಿಯಾಣ ರಾಜ್ಯದಲ್ಲಿ ಹಲ್ಲೆ ನಡೆದಿದ್ದು, ಪ್ರಕರಣ ಸಂಬಂಧ 6 ಮಂದಿ ಆರೋಪಿಗಳ ಪೈಕಿ ಮೂವರನ್ನು ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ...
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಇಬ್ಬರು ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಹರಿಯಾಣ ರಾಜ್ಯದಲ್ಲಿ ಹಲ್ಲೆ ನಡೆದಿದ್ದು, ಪ್ರಕರಣ ಸಂಬಂಧ 6 ಮಂದಿ ಆರೋಪಿಗಳ ಪೈಕಿ ಮೂವರನ್ನು ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.
ಮಹೇಂದ್ರಗಢ ಎಂಬಲ್ಲಿ ನಿನ್ನೆ ಪ್ರಾರ್ಥನೆ ಮುಗಿಸಿ ಬರುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ಮೇಲೆ ದುಷ್ಕರ್ಮಿಗಳ ಗುಂಪೊಂದು ಹಲ್ಲೆ ನಡೆಸಿದೆ. ಹಲ್ಲೆಗೊಳಗಾದ ಯುವಕರನ್ನು ಕೇಂದ್ರೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೆಂದು ಗುರ್ತಿಸಲಾಗಿದೆ.
ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಮಹೇಂದ್ರಗಢ ಎಸ್'ಪಿ ಕಮಲ್ ದೀಪ್ ಅವರು, ಪ್ರಕರಣ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳನ್ನು ಗುರ್ತಿಸಿ ಮೂವರನ್ನು ಬಂಧನಕ್ಕೊಳಪಡಿಸಲಾಗಿದೆ. ಪ್ರಸ್ತುತ ತನಿಖೆ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.
ಘಟನೆಗ ತೀವ್ರ ಆಘಾತ ವ್ಯಕ್ತಪಡಿಸಿರುವ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ತನಿಖೆ ನಡೆಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರಿಗೆ ಮನವಿ ಮಾಡಿದ್ದಾರೆ.